ಕಲಬುರಗಿ: ಆಳಂದ ಪುರಸಭೆ ಮುಖ್ಯಾಧಿಕಾರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಶಾಸಕ ಸುಭಾಷ ಗುತ್ತೇದಾರ ವಿರುದ್ಧ ಆಳಂದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ ಅವರಿಗೆ ಶಾಸಕರು ಮೊಬೈಲ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಆಡಿಯೋ ದಾಖಲೆಯೊಂದಿಗೆ ಪುರಸಭೆ ಮುಖ್ಯಾಧಿಕಾರಿ ನೀಡಿರುವ ದೂರಿನ ಆಧಾರದ ಮೇಲೆ ಮೊಕದ್ದಮೆದಾಖಲಾ ಗಿದೆ. ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಶಾಸಕ ಹಾಗೂ ಮುಖ್ಯಾಧಿಕಾರಿ ನಡುವೆ ವೈಮನಸ್ಸು ಉಂಟಾಗಿತ್ತು.
ಶಾಸಕರು ಆವಾಜ್ ಹಾಕಿರುವ ಆಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅಲ್ಲದೆ, ಶಾಸಕರು ನಿಂದಿಸಿದ ಕುರಿತು ಚಂದ್ರಕಾಂತ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ, ಆತ್ಮಹತ್ಯೆ ಮಾಡಿಕೊಂಡರೆ ಶಾಸಕರೇ ನೇರ ಹೊಣೆಯಾಗಿರುತ್ತಾರೆ ಎಂದು ಆರೋಪಿಸಿದ್ದರು. ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಬಸವ ಸೇನೆ
ಹಾಗೂ ಇತರರು ಪ್ರತಿಭಟನೆ ನಡೆಸಿದ್ದರು.