ಬೆಂಗಳೂರು: ಸಾಫ್ಟ್ವೇರ್ ಎಂಜಿನಿಯರ್ ವೊಬ್ಬರಿಂದ ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಎಎಸ್‌ಐ ವಿರುದ್ಧ ಭ್ರಷಾಾrಚಾರ ನಿಗ್ರಹ ದಳ(ಎಸಿಬಿ) ಎಫ್ಐಆರ್ ದಾಖಲಿಸಿದೆ.
ಕೆ. ಆರ್. ಪುರ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಜಯರಾಜ್ ಮತ್ತು ಕೆ.ಆರ್. ಪುರ ಠಾಣೆಯ ಎಎಸ್‌ಐ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಸಾಫ್ಟ್ವೇರ್ ಎಂಜಿನಿಯರ್ ಸಂಜು ರಾಜನ್ ನಾಯರ್ ವಿರುದ್ಧ ಆತನ ಪತ್ನಿ ದೂರು ದಾಖಲಿಸಿದ್ದರು.
ಹೀಗಾಗಿ ಬಂಧನಕೊೊRಳಗಾಗಿದ್ದ ಸಂಜು ರಾಜನ್ ಬಳಿಕ ಜಾಮೀನಿನ ಮೇರೆಗೆ ಹೊರಬಂದಿದ್ದರು. ಜಾಮೀನ ಷರತ್ತಿನಂತೆ ಪ್ರತಿ ಬಾರಿ ಠಾಣೆಗೆ ಆಗಮಿಸಿ ಸಹಿ ಮಾಡುವ ವೇಳೆ ಪೊಲೀಸರು ಸಂಜು ಅವರಿಂದ 500 ರೂ. ಹಾಗೂ ಎಎಸ್‌ಐ ಶಿವಕುಮಾರ್ ಒಮ್ಮೆ 10 ಸಾವಿರ ರೂ. ಲಂಚ ಪಡೆದಿದ್ದರು. ಅಲ್ಲದೇ ಈ ಪ್ರಕರಣದಲ್ಲಿ ಬೇಗನೆ ಚಾರ್ಜ್‌ಶೀಟ್ ಮಾಡಿ ಕೊಡುವುದಾಗಿ ಹೇಳಿ ರಾಜನ್ ಅವರಿಂದ ಆಗಿನ ಇನ್ಸ್‌ಪೆಕ್ಟರ್ ಆಗಿದ್ದ ಜಯರಾಜ್ 80 ಸಾವಿರ ಹಣ ಪಡೆದಿದ್ದರು ಎನ್ನಲಾಗಿದೆ.
ಈ ಸಂಬಂಧ ಸಂಜು ರಾಜನ್ ನಾಯರ್ ಎಸಿಬಿಯಲ್ಲಿ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜಯರಾಜ್ ಸದ್ಯ ಸಿಐಡಿಯಲ್ಲಿ ಕೆಲಸ ಮಾಡುತ್ತಿದ್ದು, ಶಿವಕುಮಾರ್, ಕೆ.ಆರ್. ಪುರ ಠಾಣೆಯಲ್ಲಿಯೇ ಕೆಲಸ ನಿರ್ವಹಿಸುತ್ತಿ¨ªಾರೆ. ಲಂಚ ಪಡೆದ ಕುರಿತು ದೂರು ದಾಖಲಿಸಿ ತನಿಖೆ ನಡೆಸಿದ ಎಸಿಬಿ ಅಧಿಕಾರಿಗಳು, ಇನ್ಸ್‌ಪೆಕ್ಟರ್ ವಿರುದ್ಧ ಕ್ರಮಕ್ಕೆ ಅನುಮತಿ ನೀಡಬೇಕೆಂದು 17ಎ ಅಡಿ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ. ಅಲ್ಲಿಂದ ಅನುಮತಿ ಸಿಕ್ಕ ಬಳಿಕ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿ¨ªಾರೆ ಎನ್ನಲಾಗಿದೆ