ಮಂಗಳೂರು: ನಗರದ ಹೊರವಲಯ ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Advertisement
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಜಗದೀಶ್ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಯಾವುದೋ ಸಂಶಯಾಸ್ಪದ ವಿಷಪೂರಿತ ಆಹಾರ ನೀಡಲಾಗಿದೆ. ಆಹಾರ ತಯಾರಿಗೆ ಮತ್ತು ಪೂರೈಕೆಯಲ್ಲಿ ಶುಚಿತ್ವ ಕಾಪಾಡದೆ ನಿರ್ಲಕ್ಷ್ಯ ವಹಿಸಲಾಗಿದೆ. ಆಸ್ವತ್ರೆಗೆ ದಾಖಲಿಸುವ ಸಂದರ್ಭ ಸೂಕ್ತ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ವರದಿ ಮಾಡದೆ ಲೋಪ ಎಸಗಿರುವುದು ಕಂಡು ಬಂದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.