Advertisement

ಸಾಗರ ಠಾಣೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

12:32 PM May 21, 2020 | keerthan |

ಶಿವಮೊಗ್ಗ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಧಾನಿ ಮೋದಿ ವಿರುದ್ಧ ಸೋನಿಯಾ ಗಾಂಧಿ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಲ್ಲಿನ ವಕೀಲರೊಬ್ಬರು ದೂರು ದಾಖಲು ಮಾಡಿದ್ದಾರೆ.

Advertisement

ಕಾಂಗ್ರೆಸ್ ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೋದಿ ಅವರು ಪಿಎಂ ಕೇರ್ ಫಂಡ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬರೆದಿದೆ. ಅಲ್ಲದೆ ಪಿಎಂ ಕೇರ್ ಫಂಡ್ ಫ್ರಾಡ್ ಎಂದು ಕಾಂಗ್ರೆಸ್ ಟ್ವಿಟರ್ ನಲ್ಲಿ ಟೀಕಿಸಿದೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ  ಸಾಗರದ ವಕೀಲ ಪ್ರವೀಣ್ ಎಂಬುವರು ದೂರು ನೀಡಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಕೀಲ ಪ್ರವೀಣ್ ದೂರು ಆಧರಿಸಿ ಸಾಗರ ಪಟ್ಟಣ ಠಾಣೆ ಪೊಲೀಸರು‌ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next