ರಾಯ್ ಪುರ್: ಕೋವಿಡ್ 19 ಚಿಕಿತ್ಸೆಯಲ್ಲಿ ಅಲೋಪತಿ ವೈದ್ಯ ಪದ್ಧತಿ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿದ್ದ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಛತ್ತೀಸ್ ಗಢ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಸೋಷಿಯಲ್ ಮೀಡಿಯಾ ಶೇಕ್ ಮಾಡಿದ ನಟಿ ಶಮಾ ಸಿಕಂದರ್ ಬೋಲ್ಡ್ ಪಿಕ್
ವರದಿಯ ಪ್ರಕಾರ, ಬಾಬಾ ರಾಮ್ ದೇವ್ ವಿರುದ್ಧ ರಾಯ್ ಪುರ್ ನಲ್ಲಿ ಎಫ್ ಐಆರ್ ದಾಖಲಾಗಿದೆ ಎಂದು ತಿಳಿಸಿದೆ. ಛತ್ತೀಸ್ ಗಢದ ಐಎಂಎ( ಇಂಡಿಯನ್ ಮೆಡಿಕಲ್ ಅಸೋಸಿಯೇಶನ್) ಘಟಕ ಬುಧವಾರ (ಜೂನ್ 16) ರಾತ್ರಿ ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲಿಸಿರುವುದಾಗಿ ರಾಯ್ ಪುರ್ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಯಾದವ್ ತಿಳಿಸಿದ್ದಾರೆ.
ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಐಪಿಸಿ ಸೆಕ್ಷನ್ 188, 269, 504 ಮತ್ತು 2005ರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಯಾದವ್ ಈ ಸಂದರ್ಭದಲ್ಲಿ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.
ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಸ್ಪತ್ರೆ ಮಂಡಳಿಯ (ಐಎಂಎ) ಅಧ್ಯಕ್ಷ ರಾಕೇಶ್ ಗುಪ್ತಾ, ಐಎಂಎ ರಾಯ್ ಪುರ್ ಅಧ್ಯಕ್ಷ ಮತ್ತು ವಿಕಾಸ್ ಅಗರ್ವಾಲ್ ಈ ಮೊದಲು ದೂರು ನೀಡಿರುವುದಾಗಿ ವರದಿ ವಿವರಿಸಿದೆ.