Advertisement

ಎಫ್ಐಆರ್‌ ರದ್ದು: ಶಾಸಕ ಮುನಿರತ್ನ ಅರ್ಜಿ ವಜಾ

12:37 AM Apr 04, 2019 | Lakshmi GovindaRaju |

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು ಎನ್ನಲಾದ ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್‌ ರದ್ದುಗೊಳಿಸಬೇಕು ಎಂದು ಕೋರಿ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.

Advertisement

ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.

ಆದ್ದರಿಂದ ಈ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಅರ್ಜಿ ವಜಾಗೊಳಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸರು ಎಫ್ಐಆರ್‌ ದಾಖಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next