Advertisement
1997ರಲ್ಲಿ ಮೈಸೂರಿನ ವಿಜಯನಗರ 2ನೇ ಹಂತದಲ್ಲಿ ನಿವೇಶನ ಖರೀದಿಸಿ, ಕೋಟ್ಯಂತರ ರೂ.ಮೌಲ್ಯದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆಂದು ವಕೀಲರಾದ ಎನ್.ಗಂಗರಾಜು ಅವರು ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ಅಂದು ಮುಡಾ ಅಧ್ಯಕ್ಷರಾಗಿದ್ದ ಸಿ.ಬಸವೇಗೌಡ, ಹಾಲಿ ಅಧ್ಯಕ್ಷ ಡಿ.ಧ್ರುವಕುಮಾರ್, ಮುಡಾ ಆಯುಕ್ತ ಕಾಂತರಾಜ್ ವಿರುದ್ಧ ಪ್ರಕರಣ ದಾಖಲಿಸಿ ಜು.23ರೊಳಗೆ ವರದಿ ನೀಡುವಂತೆ ನ್ಯಾಯಾಲಯ ಜೂ.18ರಂದು ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದ ಪ್ರತಿ ಶನಿವಾರ ತಲುಪಿದ ಹಿನ್ನೆಲೆಯಲ್ಲಿ ಈ ನಾಲ್ವರ ವಿರುದ್ಧ ಎಫ್ಐಆರ್ (ಸಂಖ್ಯೆ 0049/2018) ದಾಖಲಿಸಿಕೊಳ್ಳಲಾಗಿದೆ.
ಮೈಸೂರು ತಾಲೂಕು ಕಸಬಾ ಹೋಬಳಿ ಹಿನಕಲ್ ಗ್ರಾಮದ ಸರ್ವೇ ನಂ.70/4ರಲ್ಲಿ ಸಾಕಮ್ಮ ಎಂಬುವರಿಗೆ ಸೇರಿದ 10 ಗುಂಟೆ ಜಾಗವನ್ನು ಸಿದ್ದರಾಮಯ್ಯ ಖರೀದಿಸಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಯಮಾವಳಿ ಉಲ್ಲಂ ಸಿ ಮನೆ ನಿರ್ಮಿಸಿದ್ದರು. ಮನೆ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿಗೆ ಸಲ್ಲಿಸಿದ ಅರ್ಜಿಯಲ್ಲಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ನಮೂದಿಸಿ ಪ್ರಭಾವ ಬೀರಲಾಗಿದೆ. ನಿಯಮಾವಳಿ ಉಲ್ಲಂ ಸಿ ಮನೆ ನಿರ್ಮಿಸಲು ಅಂದು ಮುಡಾ ಅಧ್ಯಕ್ಷರಾಗಿದ್ದ ಸಿ.ಬಸವೇಗೌಡ ಸಹಕರಿಸಿದ್ದಾರೆ ಎಂದು ದೂರು ನೀಡಲಾಗಿತ್ತು. ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಾಗಿದೆ. ಆದರೆ, ಅಧಿಕಾರಿಗಳು ಯಾವ ರೀತಿ ತನಿಖೆ ನಡೆಸುತ್ತಾರೆ ಎಂಬುದನ್ನು ನೋಡಬೇಕು. ತನಿಖೆ ಪಾರದರ್ಶಕವಾಗಿ ನಡೆದರೆ, ಸಿದ್ದರಾಮಯ್ಯ ಬಂಧನವಾಗುವುದು ಖಚಿತ.
– ಎನ್.ಗಂಗರಾಜು, ದೂರುದಾರ.