Advertisement

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

11:21 PM Nov 13, 2024 | Team Udayavani |

ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ನಗರದ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

Advertisement

ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಮಂಗಳವಾರ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್‌ ಕಲಂ 353(1)(ಬಿ) ಅನ್ವಯ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ನಿತ್ಯ ಸಿಎಂ ವಿರುದ್ಧ ಆರೋಪ ಮಾಡಿ, ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಎಂ. ಲಕ್ಷ್ಮಣ್‌ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಬುಧವಾರ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next