Advertisement

ಬಂಟ್ವಾಳ ಠಾಣೆಯಲ್ಲಿ ಸಂಸದರಾದ ಶೋಭಾ,ನಳಿನ್‌ ವಿರುದ್ಧ FIR ದಾಖಲು

11:51 AM Jul 08, 2017 | Team Udayavani |

ಬಂಟ್ವಾಳ: ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಹತ್ಯೆ ಯತ್ನ ಖಂಡಿಸಿ ಶುಕ್ರವಾರ ಬಂಟ್ವಾಳದಲ್ಲಿ ನಿಷೇಧಾಜ್ಞೆಯ ನಡುವೆಯೂ ಪ್ರತಿಭಟನೆ ನಡೆಸಿದ್ದಕ್ಕಾಗಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ. 

Advertisement

ಸಾವಿರಾರು ಜನರು ಭಾಗಿಯಾಗಿದ್ದ ಪ್ರತಿಭಟನೆಯಲ್ಲಿ  ಸಂಸದರಿಬ್ಬರು ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು. ಐಪಿಸಿ ಸೆಕ್ಷನ್‌ 143 ,149 ಮತ್ತು ವಿವಿಧ ಸೆಕ್ಷನ್‌ಗಳ ಅಡಿ ಎಫ್ಐಆರ್‌ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 

ಬಿ.ಸಿ.ರೋಡ್‌ನ‌ಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ  ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ಮಡಿವಾಳ (28) ಶುಕ್ರವಾರ ರಾತ್ರಿ  ಕೊನೆಯುಸಿರೆಳೆದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next