Advertisement

FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್‌. ಅಶೋಕ್‌

11:58 PM Sep 29, 2024 | Team Udayavani |

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರವಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಅಭಿಪ್ರಾಯಪಟ್ಟಿದ್ದಾರೆ.

Advertisement

ಪತ್ರಕರ್ತರೊಂದಿಗೆ ಅವರು ಮಾತನಾಡಿ, ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂ. ಬೆಲೆಬಾಳುವ ಜಮೀನನ್ನು ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ಗೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಅನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು. ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್ಐಆರ್‌ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ ಎಂದರು.

ಸಿದ್ದರಾಮಯ್ಯನವರ ಪ್ರಕರಣ ಸಂಪುಟ ಸಭೆಯಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ. ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರದಲ್ಲಿ¨ªಾಗ ಅನೇಕ ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದ್ದರು ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next