Advertisement

ಮಹಿಳೆಯನ್ನು ಮನೆಯಿಂದ ಹೊರಗೆಳೆದು ಐವರಿಂದ ಅತ್ಯಾಚಾರ; ವಿಡಿಯೋ ವೈರಲ್!

03:38 PM May 01, 2022 | Team Udayavani |

ಶಹಜಹಾನ್‌ ಪುರ: 30 ವರ್ಷದ ಮಹಿಳೆಯನ್ನು ಐವರು ಆರೋಪಿಗಳು ಮನೆಯಿಂದ ಹೊರಗೆಳೆದು ಆಕೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ.

Advertisement

ಆರೋಪಿಗಳು ಕೃತ್ಯವನ್ನು ರೆಕಾರ್ಡ್ ಮಾಡಿ ವೀಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಏಪ್ರಿಲ್ 22 ರಂದು ಐವರು ಆರೋಪಿಗಳು ತನ್ನನ್ನು ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಅಧಿಕಾರಿಗಳು ಕೂಡಾ ಜನರೊಂದಿಗೆ ಬೆರೆಯುವ ಪರಿಪಾಠ ಬೆಳೆಸಿಕೊಳ್ಳಬೇಕು: ಕಿರಣ್‌ ಬೇಡಿ

ಮಹಿಳೆಯ ದೂರಿನ ಆಧಾರದ ಮೇಲೆ ಶನಿವಾರದಂದು ಸಾಮೂಹಿಕ ಅತ್ಯಾಚಾರದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸಂಜಯ್ ಕುಮಾರ್ ಹೇಳಿದರು.

Advertisement

ಆರೋಪಿಗಳು, ಕೃತ್ಯವನ್ನು ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಘಟನೆಯ ಒಂದು ವಾರದ ನಂತರ ವೀಡಿಯೊವನ್ನು ವೈರಲ್ ಮಾಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next