ನಾಲತವಾಡ: ಆಂದ್ರಪ್ರದೇಶ ರೈತರ ಲಕ್ಷ್ಮಿ ಕ್ಯಾಂಪ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ.
ಬೆಂಕಿ ಅವಘಡದಲ್ಲಿ ಮೂರು ಶೆಡ್‌ಗಳು ಸಂಪೂರ್ಣವಾಗಿ ಭಸ್ಮವಾಗಿದ್ದು, ಉಳಿದಂತೆ ಒಂದು ಟ್ರ್ಯಾಕ್ಟರ್, ಮೂರು ಬೈಕ್, ಅಪಾರ ಪ್ರಮಾಣದ ಗೊಬ್ಬರ ಹಾಗೂ ಅಕ್ಕಿ ಪಾಕೆಟ್ ಸೇರಿದಂತೆ ದೈನಂದಿನ ವಸ್ತುಗಳು ಬೆಂಕಿಗಾಹುತಿ ಅಗಿವೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸಿದ್ದು, ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪಿಎಸ್ಐ ಸೇರಿದಂತೆ ನಾಲತವಾಡ ಹೊರ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Related Articles
ಇದನ್ನೂ ಓದಿ: ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ
ಘಟನೆ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಘಟನೆಯಿಂದಾಗಿ ಅಂದಾಜು 30 ಲಕ್ಷ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.