Advertisement

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

10:40 PM May 05, 2024 | Team Udayavani |

ಕಾರ್ಕಳ: ವಿವಾದಿಕ ಪರಶುರಾಮ ಥೀಂ ಪಾರ್ಕ್‌ನ ಇರುವ ಬೈಲೂರು ಸಮೀಪದ ಉಮಿಕ್ಕಳ ಗುಡ್ಡದಲ್ಲಿ ರವಿವಾರ ಬೆಂಕಿ ಅವಘಡ ಸಂಭವಿಸಿದೆ.

Advertisement

ಗುಡ್ಡದ ತಳದಲ್ಲಿ ಅಪರಾಹ್ನ 3ರ ವೇಳೆಗೆ ಕಾಣಿಸಿಕೊಂಡ ಬೆಂಕಿ ಗಿಡ ಮರ ಬಳ್ಳಿಗೆ ಹತ್ತಿಕೊಂಡು ಗಾಳಿಗೆ ತೀವ್ರಗತಿಯಲ್ಲಿ ವ್ಯಾಪಿಸಿತ್ತು. ಸ್ಥಳೀಯರ ಮಾಹಿತಿಯಂತೆ ಅಗ್ನಿಶಾಮಕ ದಳದವರು ಧಾವಿಸಿ ಬಂದು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. ಆದರೆ ಬೆಂಕಿ ಹಬ್ಬಿಕೊಂಡ ಸ್ಥಳ ಬೆಟ್ಟದ ಕೆಳಗಿನ ಪ್ರದೇಶವಾಗಿದ್ದು ಅಲ್ಲಿಗೆ ತೆರಳಲು ಸಾಧ್ಯವಾಗಲಿಲ್ಲ. ಇನ್ನೊಂದೆಡೆ ಬೃಹತ್‌ ಪ್ರಮಾಣದ ಮುಳ್ಳು ಅಡ್ಡಿಯಾಯಿತು. ಬಳಿಕ ಅಗ್ನಿಶಾಮಕ ದಳದ ಸಿಬಂದಿ, ಸ್ಥಳೀಯರು ನೀರನ್ನು ಹೊತ್ತೊಯ್ದು ನಂದಿಸುವ ಕಾರ್ಯಾಚರಣೆ ನಡೆಸಿದರು. ಅರಣ್ಯ ಇಲಾಖೆಯ ನೆರವನ್ನು ಪಡೆದುಕೊಳ್ಳಲಾಯಿತು. ಸುಮಾರು 30 ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದ್ದು ಸಂಜೆ 6ರ ವೇಳೆಗೆ ನಿಯಂತ್ರಣಕ್ಕೆ ಬಂತು.

ಚರ್ಚೆಗೆ ಗ್ರಾಸ
ಪರಶುರಾಮ ಥೀಂ ಪಾರ್ಕ್‌ನ ತಳ ಭಾಗದಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆಯಾದರೂ ಮಧ್ಯಭಾಗದಲ್ಲಿ ಖಾಲಿ ಬಂಡೆಗಳಿರುವ ಕಾರಣ ಬೆಂಕಿ ಮೇಲ್ಭಾಗಕ್ಕೆ ವ್ಯಾಪಿಸಿಲ್ಲ. ಇಲ್ಲಿರುವ ಪರಶುರಾಮ ಥೀಂ ಪಾರ್ಕ್‌ನ ವಿಗ್ರಹ ಕುರಿತು ವಿವಾದ ತಾರಕಕ್ಕೇರಿರುವ ಹೊತ್ತಲ್ಲೆ ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ಸಾಕಷ್ಟು ಚರ್ಚೆಗಳಿಗೆ ಎಡೆಮಾಡಿ ಕೊಟ್ಟಿತು.

Advertisement

Udayavani is now on Telegram. Click here to join our channel and stay updated with the latest news.

Next