Advertisement

ದೇವನಹಳ್ಳಿ: ಹೊತ್ತಿ ಉರಿದ ಹೆದ್ದಾರಿ ಬದಿಯ ಹೋಟೆಲ್

02:59 PM Nov 18, 2021 | Team Udayavani |

ಬೆಂಗಳೂರು : ದೇವನಹಳ್ಳಿಯ ಹೊರವಲಯದ ಹೆದ್ದಾರಿ ಬದಿಯಲ್ಲಿರುವ ಹೋಟೆಲ್ ವೊಂದರಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಅದೃಷ್ಟವಷಾತ್ ಸಿಬ್ಬಂದಿಗಳು ಪಾರಾಗಿದ್ದಾರೆ.

Advertisement

ಅಡುಗೆ ಕೊನೆಯಲ್ಲಿ ಬೆಂಕಿ ಕಾಣಿಸಿ ಕೊಂಡು ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಹೋಟೆಲನ್ನು ಆವರಿಸಿದೆ ಎಂದು ತಿಳಿದು ಬಂದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳು ಹೊರಗೆ ಓಡಿ ಬಂದು, ಅಗ್ನಿ ಶಾಮಕ ದಳಕ್ಕೆ ಸುದ್ದಿ ತಿಳಿಸಿದ್ದಾರೆ.

ಮಳೆಯಿಂದಾಗಿ ಹೋಟೆಲ್ ನಲ್ಲಿ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು ಎಂದು ತಿಳಿದು ಬಂದಿದೆ.

ಮೂರು ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ  ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next