Advertisement

ವಿಜಯಪುರ : ವಿದ್ಯುತ್ ಅವಘಡದಲ್ಲಿ ಸುಟ್ಟು ಕರಕಲಾದ ಮನೆ

09:47 AM Dec 06, 2019 | keerthan |

ವಿಜಯಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಾಗಿ ಮನೆಗೆ ಸುಟ್ಟು ಕರಕಲಾದ ಘಟನೆ ವಿಜಯಪುರ ನಗರದ ಹೊರ ಭಾಗದ ಅಲ್ಲಾಪುರ ತಾಂಡಾದಲ್ಲಿ ಜರುಗಿದೆ.

Advertisement

ಗುರುವಾರ ಬೆಳಗಿನ ಜಾವ ಗೋಲ ಗುಂಬಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಗೇಮು ರಾಠೋಡ್ ಎಂಬವವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ.

ಈ ವಿದ್ಯುತ್ ಅವಘಡದಿಂದ ಮನೆಯಲ್ಲಿದ್ದ  ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.  ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next