Advertisement

ಔಷಧಿ ಘಟಕದಲ್ಲಿ ಅಗ್ನಿ ಆಕಸ್ಮಿಕ; ಆರು ಮಂದಿ ಸಾವು, 12 ಜನರಿಗೆ ಗಾಯ!

09:40 AM Apr 14, 2022 | Team Udayavani |

ಹೈದರಾಬಾದ್: ಔಷಧ ಘಟಕವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡ ಘಟನೆ ಗುರುವಾರ ಮಧ್ಯರಾತ್ರಿ ಆಂಧ್ರಪ್ರದೇಶದಲ್ಲಿ ನಡೆದಿದೆ. ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡಿದ್ದು ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

Advertisement

ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡಾಗ 18 ಸಂತ್ರಸ್ತರು ಔಷಧೀಯ ಘಟಕದ 4 ನೇ ಘಟಕದಲ್ಲಿ ಕೆಲಸ ಮಾಡುತ್ತಿದ್ದರು.

ಎರಡು ಗಂಟೆಯಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಮೃತಪಟ್ಟ ಆರು ಮಂದಿಯಲ್ಲಿ ನಾಲ್ವರು ಬಿಹಾರದಿಂದ ವಲಸೆ ಬಂದ ಕಾರ್ಮಿಕರು.

ಮೃತರನ್ನು ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಅಮೆರಿಕದ ಮಾನವ ಹಕ್ಕುಗಳ ಪರಿಸ್ಥಿತಿಯ ಬಗ್ಗೆ ಭಾರತವೂ ಅಭಿಪ್ರಾಯ ಹೊಂದಿದೆ: ಜೈಶಂಕರ್ ತಿರುಗೇಟು

Advertisement

ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ  25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರಿಗೆ ತಲಾ 5 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದರು. ಗಾಯಗೊಂಡವರ ಸ್ಥಿತಿಯ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next