Advertisement

ಮುಂಬೈ: ಮಲಾಡ್ ನಲ್ಲಿ ಹಳೇ ಗೋದಾಮಿನಲ್ಲಿ ಅಗ್ನಿ ಅವಘಡ, ಭಾರೀ ನಷ್ಟ

10:01 AM Nov 07, 2019 | Team Udayavani |

ಮುಂಬೈ: ಮುಚ್ಚಲ್ಪಟ್ಟಿದ್ದ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿರುವ ಘಟನೆ ಮುಂಬೈನ ಮಲಾಡ್ ಪಶ್ಚಿಮ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ವರದಿ ತಿಳಿಸಿದೆ.

Advertisement

ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಟ್ಟವಾದ ಕಪ್ಪು ಹೊಗೆ ಕಟ್ಟಡದ ಸುತ್ತಲೂ ಆವರಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಅಗ್ನಿ ಅವಘಡ ಸಂಭವಿಸಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಸಂಭವಿಸಿದ ನಷ್ಟದ ಪ್ರಮಾಣ ಎಷ್ಟು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next