Advertisement

ದೆಹಲಿಯಲ್ಲಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ 15 ಅಗ್ನಿಶಾಮಕ ವಾಹನ ದೌಡು

04:51 PM Jan 08, 2023 | Team Udayavani |

ನವದೆಹಲಿ : ದೆಹಲಿಯ ಓಕ್ಲಾದಲ್ಲಿರುವ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಭಾನುವಾರ ನಡೆದಿದೆ.

Advertisement

ದೆಹಲಿಯ ಒಂದನೇ ಹಂತದ ಕಾರ್ಖಾನೆಯಲ್ಲಿ ಮಧ್ಯಾಹ್ನ 12:30 ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳಕ್ಕೆ 15 ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹೇಳಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಇದನ್ನೂ ಓದಿ: ವಿಶ್ವದ ಅತಿ ಉದ್ದದ ನದಿ ವಿಹಾರ ನೌಕೆಗೆ ಚಾಲನೆ ನೀಡಲಿರುವ ಪ್ರಧಾನಿ

Advertisement

Udayavani is now on Telegram. Click here to join our channel and stay updated with the latest news.

Next