Advertisement

ಉತ್ತರ ಕನ್ನಡ ‌ಜಿ.ಪಂ ಅಭಿಲೇಖಾಲಯ ಕಟ್ಟಡಕ್ಕೆ ಬೆಂಕಿ;ಕೆ- ಸ್ವಾನ್ ಕೊಠಡಿ ದಾಖಲೆ ಆಗ್ನಿಗಾಹುತಿ

10:41 AM Jun 05, 2021 | Team Udayavani |

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿನ ಅಭಿಲೇಖಾಲಯ ಕಚೇರಿ ಕಟ್ಟಡದೊಳಗೆ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ‌ ಅವಘಡ ಸಂಭವಿಸಿದೆ.

Advertisement

ಬೆಳಿಗ್ಗೆ 8. 15 ರ ಸುಮಾರಿಗೆ ಇದ್ದಕ್ಕಿದ್ದಂತೆ ಕಟ್ಟಡದೊಳಗೆ ಬೆಂಕಿ ಕಾಣಿಸಿಕೊಂಡಿದ್ದು,‌ ಕ್ಷಣಾರ್ಧದಲ್ಲಿ ಎರಡು ಅಂತಸ್ತಿನವರೆಗೂ ವ್ಯಾಪಿಸಿತು. ತಕ್ಷಣವೇ ಸ್ಥಳೀಯರ‌ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಪಟ್ಟರು. ಒಂದು ವಾಹನದ ಟ್ಯಾಂಕ್ ನೀರು ಖಾಲಿಯಾದರೂ ಬೆಂಕಿ ಮಾತ್ರ ನಂದಿರಲಿಲ್ಲ. ಮತ್ತೆ ಮತ್ತೊಂದು ವಾಹನವನ್ನು ಸ್ಥಳಕ್ಕೆ ಕರೆಯಿಸಿ ನಂದಿಸುವ ಕಾರ್ಯ ಮಾಡಲಾಯಿತು.

ಕಟ್ಟಡದ ನೆಲ ಅಂತಸ್ತಿನಲ್ಲಿ ಕೆ-ಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್ ಇದ್ದು, ಈ ಸಭಾಂಗಣ ಸಂಪೂರ್ಣ ಪ್ಲೈವುಡ್ ನಿಂದ ಕೂಡಿದ್ದಾಗಿದೆ. ಈ ಕಾರಣದಿಂದಾಗಿ ಬೆಂಕಿ ಹೆಚ್ಚಿನ ಪ್ರಮಾಣದಲ್ಲಿ ಹೊತ್ತಿಕೊಂಡಿದೆ. ಮೊದಲ ಅಂತಸ್ತಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಚೇರಿ ಹಾಗೂ ಅಕ್ಷರ ದಾಸೋಹ ಕಚೇರಿ ಇದ್ದು, ಮೂರನೇ ಅಂತಸ್ತಿನಲ್ಲಿ ದಾಖಲೆಗಳ ಕೊಠಡಿ ಇದೆ. ಪ್ರಾಥಮಿಕ ಮಾಹಿತಿ ಪ್ರಕಾರ ಮೂರು ಅಂತಸ್ತಿಗೂ ಬೆಂಕಿಯ ಜ್ವಾಲೆ ಆವರಿಸಿದೆಯಾದರೂ ರೆಕಾರ್ಡ್ಸ್ ಕೋಣೆಗೆ ಬೆಂಕಿ ತಗುಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯದ ಅಮಲು!

ಸುಮಾರು ಮೂರು ವರ್ಷಗಳ ಹಿಂದೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಚಂದ್ರಶೇಖರ ಅವರ ಮುಖ್ಯ ಛೇಂಬರ್ ನಲ್ಲೂ ಬೆಂಕಿ ಅವಘಡ ಸಂಭವಿಸಿತ್ತು.

Advertisement

ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next