Advertisement

ದೆಹಲಿ CGO ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ;ಸರ್ಕಾರಿ ದಾಖಲೆಗಳು ಭಸ್ಮ

04:32 AM Mar 06, 2019 | Team Udayavani |

ನವದೆಹಲಿ: ದೆಹಲಿಯ ಸಿಜಿಓ ಕಾಂಪ್ಲೆಕ್ಸ್ ನಲ್ಲಿನ 5ನೇ ಮಹಡಿಯಲ್ಲಿರುವ ಪಂಡಿತ್ ದೀನ್ ದಯಾಳ್ ಅಂತ್ಯೋದಯ ಭವನದಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿಯಿಂದ ಮಹತ್ವದ ಸರ್ಕಾರಿ ದಾಖಲೆಗಳು ಸುಟ್ಟು ಭಸ್ಮವಾಗಿದೆ ಎಂದು ವರದಿ ತಿಳಿಸಿದೆ. ಸುಮಾರು 24 ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿರುವುದಾಗಿ ವರದಿ ವಿವರಿಸಿದೆ.

Advertisement

ಹಲವು ಸರ್ಕಾರಿ ಕಚೇರಿಗಳು ಕಾಂಪ್ಲೆಕ್ಸ್ ನಲ್ಲಿದೆ. ಆಕಸ್ಮಿಕ ಬೆಂಕಿ ಅವಘಡದಿಂದ ಭದ್ರತಾ ಅಧಿಕಾರಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆಂದು ವರದ ಹೇಳಿದೆ. ಇಂದು ಬೆಳಗ್ಗೆ 8.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿತ್ತು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಈ ಬಹುಮಹಡಿ ಕಟ್ಟಡದಲ್ಲಿ ಭಾರತೀಯ ವಾಯುಪಡೆ ಶಾಖೆ, ನೀರು ಮತ್ತು ನೈರ್ಮಲ್ಯ ಸಚಿವಾಲಯ, ಅರಣ್ಯ ಸಚಿವಾಲಯ, , ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಅಂತ್ಯೋದಯ ಭವನದಲ್ಲಿದೆ ಎಂದು ವರದಿ ಹೇಳಿದೆ. 2016ರವರೆಗೆ ಈ ಭವನವನ್ನು ಪರ್ಯಾವರಣ್ ಭವನ್ ಎಂದೇ ಕರೆಯಲಾಗುತ್ತಿತ್ತು…ಬಳಿಕ ದೀನ್ ದಯಾಳ್ ಅಂತ್ಯೋದಯ ಭವನ್ ಎಂದು ಮರು ನಾಮಕರಣ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next