Advertisement

ವಿಶಾಖಪಟ್ಟಣಂ ನಲ್ಲಿ ಮತ್ತೊಂದು ದುರಂತ: ಔಷಧಿ ತಯಾರಕ ಘಟಕದಲ್ಲಿ ಭಾರೀ ಸ್ಪೋಟ

08:04 AM Jul 14, 2020 | Mithun PG |

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಔಷಧಿ ತಯಾರಿಕ ಘಟಕವೊಂದರಲ್ಲಿ ಸೋಮವಾರ ಮಧ್ಯರಾತ್ರಿ 12 ಗಂಟೆಯ ವೇಳೆಗೆ ಭಾರೀ ಸ್ಫೋಟ ಸಂಭವಿಸಿದ್ದು ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಪರವಾಡಾ ಪ್ರದೇಶದ ಜೆ. ಎಂ ಫಾರ್ಮಾಸಿಟಿಯಲ್ಲಿ ಈ ಸ್ಪೋಟ ಸಂಭವಿಸಿದ್ದು ಸ್ಥಳೀಯ ನಿವಾಸಿಗಳಲ್ಲಿ ಆತಂಕವನ್ನುಂಟುಮಾಡಿದೆ. ಫಾರ್ಮಾ ಸಿಟಿಯಲ್ಲಿ ಮೊದಲು ಸ್ಫೋಟ ಸಂಭವಿಸಿ, ಅದರ ನಂತರ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸುಮಾರು 9 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಸಾಗರ ತ್ಯಾಜ್ಯ ನಿರ್ವಹಣೆ ಮಾಡಲಾಗುವ ರಾಮ್ ಕಿ ದ್ರಾವಕಗಳ ಘಟಕದಲ್ಲಿ ಸ್ಪೋಟ ಸಮಭವಿಸಿದೆ ಎಂದು ಮೂಲಗಳು ತಿಳಿಸಿವೆ,

ಸುತ್ತಮುತ್ತಲಿನಲ್ಲಿ ಔಷಧಿ ಸಸ್ಯಗಳನ್ನು ಕೂಡ ನೆಡಲಾಗಿದ್ದು,  ಹಲವಾರು ಕಾರ್ಖಾನೆಗಳು ಕೂಡ ಕಾರ್ಯನಿರ್ವಹಿಸುತ್ತಿದೆ. ಬೆಂಕಿ ಹರಡದಂತೆ ಅಗ್ನಿಶಾಮಕ ವಾಹನಗಳನ್ನು ನಿಯೋಜಿಲಾಗಿದೆ ಎಂದು ವಿಶಾಕಪಟ್ಟಣ ಜಿಲ್ಲಾಧಿಕಾರಿ ವಿ. ವಿನಯ್ ಚಂದ್ ತಿಳಿಸಿದ್ದಾರೆ.

Advertisement

ಘಟನೆಯಲ್ಲಿ ಒಬ್ಬ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿದ್ದು, ಇತರ ಮೂವರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುವನ್ನು  ಚಿಕಿತ್ಸೆಗಾಗಿ ನಗರದ ಗಜುವಾಕಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಂದ್ ಹೇಳಿದ್ದಾರೆ.

ತಿಂಗಳ ಹಿಂದಷ್ಟೆ ಎಲ್ ಜಿ ಪಾಲಿಮರ್ಸ್  ಕೈಗಾರಿಕೆಯಲ್ಲಿ ವಿಷಾನಿಲ ಸೋರಿಕೆಯಾಗಿ ಹಲವರು ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ಈ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ. ಇದರೊಂದಿಗೆ ಮತ್ತೊಂದು ಔಷಧಿ ತಯಾರಕ ಘಟಕವೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next