ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!
08:20 AM Apr 23, 2021 | Team Udayavani |
ಮುಂಬೈ: ಮಹಾರಾಷ್ಟ್ರದ ಮುಂಬೈನ ವಿರಾರ್ ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ನಡೆದು 13 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
Advertisement
ವಿರಾರ್ ನ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಬೆಳಗ್ಗೆ ಸುಮಾರು 3.15ರ ಸುಮಾರಿಗೆ ಈ ದುರಂತ ನಡೆಸಿದೆ. ಐಸಿಯು ನ ಎಸಿ ಯಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಗಢ ಸಂಭವಿಸಿದೆ ಎನ್ನಲಾಗಿದೆ.
ಐಸಿಯು ನಲ್ಲಿ 17 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಐವರನ್ನು ಬೇರೆ ಕಡೆ ಸ್ಥಳಾಂತರಿಸಲಾಗಿದೆ.