ಗದಗ: ನಗರದ ಗ್ರೇನ್ ಮಾರ್ಕೆಟ್ ನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 30 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮಗೊಂಡಿವೆ.
ಮಂಗಳವಾರ ಬೆಳಗಿನ ಜಾವ ಅಗರಭತ್ತಿ ಹಾಗೂ ಕರ್ಪೂರ ಮಾರಾಟ ಅಂಗಡಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಮಾರುಕಟ್ಟೆಯ ಸುಮಾರು ಮೂವತ್ತುಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ವ್ಯಾಪಿಸಿದೆ. ಅಂಗಡಿಗಳಲ್ಲಿ ದಾಸ್ತಾನು ಮಾಡಿದ್ದ ಲಕ್ಣಾಂತರ ರೂಪಾಯಿ ಮೌಲ್ಯದ ಸರಕು ಸುಟ್ಟು ಕರಕಲಾಗಿವೆ.
ಒಂದೆರಡು ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡ ಬಳಿಕ ಘಟನೆ ಸ್ಥಳೀಯರ ಗಮನಕ್ಕೆ ಬಂದಿದೆ. ಬಳಿಕ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಈಗಾಗಲೇ ಬಹುತೇಕ ನಿಯಂತ್ರಣಕ್ಕೆ ಬಂದಿದ್ದರೂ, ಅಗರಭತ್ತಿ ಹಾಗೂ ಕರ್ಪೂರದ ಗೋದಾಮಿನಲ್ಲಿ ಬೆಂಕಿ ಮುಂದುವರಿದಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಎಸಿ ರಾಯಪ್ಪ ಹುಣಸಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.