Advertisement

ಸಂಸತ್ ಭವನದಲ್ಲಿ ಅನೆಕ್ಸ್ ಕಟ್ಟಡದಲ್ಲಿ ಅಗ್ನಿ ಅವಗಢ: 5 ಅಗ್ನಿಶಾಮಕ ವಾಹನಗಳ ದೌಡು

11:07 AM Aug 17, 2020 | keerthan |

ಹೊಸದಿಲ್ಲಿ: ಸಂಸತ್ ಭವನದ ಆನೆಕ್ಸ್ ಕಟ್ಟಡದಲ್ಲಿ ಇಂದು ಮುಂಜಾನೆ ಅಗ್ನಿ ಅವಗಢ ಸಂಭವಿಸಿದ್ದು, ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ.

Advertisement

ಸುದ್ದಿ ಸಂಸ್ಥೆ ಎಎನ್ ಐ ಈ ಬಗ್ಗೆ ವರದಿ ಮಾಡಿದ್ದು, ಪಾರ್ಲಿಮೆಂಟ್ ಆನೆಕ್ಸ್ ಕಟ್ಟಡದ ಆರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದೆ ಎಂದು ವರದಿ ಮಾಡಿದೆ.

ಬೆಳಿಗ್ಗೆ 7.30ರ ಸುಮಾರಿಗೆ ಆರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಬೆಂಕಿ ನಂದಿಸಲಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next