Advertisement
ಕೋವಿಡ್ ಹಿನ್ನೆಲೆಯಲ್ಲಿ ಕಾಳಿಪೂಜೆಯ ವೇಳೆ ಪಟಾಕಿಗಳ ಬಳಕೆ ಹಾಗೂ ಮಾರಾಟವನ್ನು ನಿಷೇಧಿಸಿ ಗುರುವಾರ ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ. ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ನ್ಯಾಯಪೀಠ ಈ ಸೂಚನೆ ನೀಡಿದೆ. ನ.15ರಂದು ಕಾಳಿ ಪೂಜೆ ನಡೆಯಲಿದೆ. ಜಗದ್ಧಾತ್ರಿ ಪೂಜೆ, ಛತ್ ಹಾಗೂ ಕಾರ್ತಿಕ ಪೂಜೆಗೂ ಇದು ಅನ್ವಯವಾಗಲಿದೆ. ಜತೆಗೆ ದೇವರ ಮೂರ್ತಿ ವಿಸರ್ಜನೆ ವೇಳೆ ಮೆರವಣಿಗೆಗೂ ನಿರ್ಬಂಧ ಹೇರಲಾಗಿದೆ.
ಇದೇ ವೇಳೆ, ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವುದರಿಂದ ಕೊರೊನಾ ಸೋಂಕಿನ ವ್ಯಾಪಿಸುವಿಕೆಯೂ ಹೆಚ್ಚಳವಾಗುವ ಸಾಧ್ಯತೆ ಇರುವುದಾಗಿ ತಜ್ಞರು ಎಚ್ಚರಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಪಟಾಕಿ ಬಳಕೆಗೆ ನಿಷೇಧ ಹೇರಲಾಗಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ಈ ಕುರಿತು ಟ್ವಿಟರ್‌ನಲ್ಲಿ ಘೋಷಿಸಿದ್ದಾರೆ. ಮಹಾರಾಷ್ಟ್ರದಲ್ಲೂ ಕೋವಿಡ್ ಪ್ರಕರಣಗಳು ಇರುವ ಕಾರಣ ಪಟಾಕಿ ಬದಲು ದೀಪ ಬೆಳಗಿಸಿ ದೀಪಾವಳಿ ಆಚರಿಸಲು ಸೂಚನೆ ನೀಡಲಾಗಿದೆ, ಅಲ್ಲದೆ ಆರೋಗ್ಯದ ಹಿತ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡಬೇಕೆಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹೇಳಿದೆ.
Related Articles
Advertisement