Advertisement

ಚಾರ್ಮಾಡಿ ಅರಣ್ಯದಲ್ಲಿಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

10:02 AM Jan 26, 2022 | Team Udayavani |

ಚಿಕ್ಕಮಗಳೂರು: ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾವುತಿಯಾಗಿರೋ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದೆ.

Advertisement

ಮಳೆಗಾಲದಲ್ಲಿ ಯತೇಚ್ಛವಾಗಿ ಮಳೆ ಸುರಿದ ಕೊಟ್ಟಿಗೆಹಾರ ಭಾಗದಲ್ಲಿ ಈಗ ಅಷ್ಟೆ ಪ್ರಮಾಣದಲ್ಲಿ ಬಿಸಿಲು ಸುಡುತ್ತಿದೆ. ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ ಪ್ರವಾಸಿಗರು ಯಾರೋ ಸಿಗರೇಟ್ ಸೇದಿ ಎಸೆದಿರುವುದರಿಂದ ಬೆಂಕಿ ತಗುಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಗುಡ್ಡಕ್ಕೆ ಬೆಂಕಿ ತಗುಲಿದೆ ಎಂದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳು ಬೆಂಕಿಯನ್ನ ನಂದಿಸಿದ್ದಾರೆ. ರಸ್ತೆಯಿಂದ ಸುಮಾರು ನಾಲ್ಕೈದು ಕಿ.ಮೀ. ದೂರದ ಎತ್ತರಕ್ಕೆ ಬೆಟ್ಟಕ್ಕೆ ದೌಡಾಯಿಸಿದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಗುಡ್ಡಕ್ಕೆ ಬೆಂಕಿ ಬಿದ್ದ ಪರಿಣಾಮ ನೂರಾರು ಪ್ರಾಣಿ-ಪಕ್ಷಿಗಳು, ಕೀಟಗಳು ಬೆಂಕಿಯಲ್ಲಿ ಬೆಂದಿವೆ. ಅರಣ್ಯ ಇಲಾಖೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಸಾವಿರಾರು ಎಕರೆ ಅರಣ್ಯ ಹಾಗೂ ಜೀವಸಂಕುಲ ಅಪಾಯದಿಂದ ಪಾರಾದಂತಿದೆ.

Advertisement

Udayavani is now on Telegram. Click here to join our channel and stay updated with the latest news.

Next