Advertisement

Delhi: ಗೋಪಾಲ್ ದಾಸ್ ಕಟ್ಟಡದಲ್ಲಿ ಅಗ್ನಿ ಅವಘಡ: 15ಕ್ಕೂ ಅಧಿಕ ಅಗ್ನಿಶಾಮಕ ವಾಹನ ದೌಡು

03:11 PM Dec 21, 2023 | Team Udayavani |

ನವದೆಹಲಿ: ದೆಹಲಿಯ ಕನ್ನಾಟ್ ಪ್ರದೇಶದಲ್ಲಿರುವ ವಾಣಿಜ್ಯ ಕಟ್ಟಡವಾದ ಗೋಪಾಲ್ ದಾಸ್ ಕಟ್ಟಡದ ಹನ್ನೊಂದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಮಧ್ಯಾಹ್ನ ಸುಮಾರು ಒಂದು ಗಂಟೆಯ ವೇಳೆಗೆ ಗಗನಚುಂಬಿ ಕಟ್ಟಡದ ಹನ್ನೊಂದನೇ ಅಂತಸ್ಥಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ೧೫ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಅಗ್ನಿ ಅವಘಡದಿಂದ ಸಾವುನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ, ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು ತನಿಖೆಯಿಂದ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದಿದ್ದಾರೆ.

ಅಗ್ನಿ ಅವಘಡ ಸಂಭವಿಸುತಿದ್ದಂತೆ ಕಟ್ಟಡದೊಳಗಿದ್ದ ಜನರನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: KKRTC; ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಪ್ರೀಮಿಯಂ ರಹಿತ ವಿಮಾ ಯೋಜನೆ ಜಾರಿ

Advertisement
Advertisement

Udayavani is now on Telegram. Click here to join our channel and stay updated with the latest news.

Next