Advertisement

5 ಅಂತಸ್ತಿನ ಕಟ್ಟದಲ್ಲಿ ಬೆಂಕಿ ಅವಘಡ : 2 ಬಲಿ,70 ಮಂದಿ ರಕ್ಷಣೆ

10:49 AM Oct 18, 2021 | Team Udayavani |

ಸೂರತ್ : ಇಲ್ಲಿನ ಕಡೋದರ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ಸೋಮವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಪ್ಯಾಕೇಜಿಂಗ್ ಘಟಕದಲ್ಲಿ ಬೆಳಗಿನ ಜಾವ 4.30 ರ ವೇಳೆಗೆ ಬೆಂಕಿ ಅವಘಡ ಸಂಭವಿಸಿದ್ದು, 70 ಮಂದಿ ಕಾರ್ಮಿಕರನ್ನು ತಕ್ಷಣ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಲಾಗಿದೆ.ರಕ್ಷಣಾ ಕಾರ್ಯ ಮುಂದುವೆದಿದೆ ಎಂದು ಕಡೋದರ ಪೊಲೀಸ್ ಅಧಿಕಾರಿ ಹೇಮಂತ್ ಪಟೇಲ್ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಕ್ಕೆ ಹೈಡ್ರಾಲಿಕ್ ಕ್ರೇನ್ ಗಳನ್ನು ಬಳಸಿಕೊಳ್ಳಲಾಗಿದೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next