ಹುಬ್ಬಳ್ಳಿ: ಇಲ್ಲಿನ ಜೆ.ಸಿ.ನಗರದಲ್ಲಿ ಶುಕ್ರವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡು ಹೋಟೆಲ್ ಹಾಗೂ ಎಟಿಎಂ ಕೇಂದ್ರ ಸುಟ್ಟು ಕರಕಲಾಗಿವೆ.
ಬೆಂಕಿ ಅವಘಡದಲ್ಲಿ ಎಲ್ಲೋರಾ ಹೋಟೆಲ್ ಭಾಗಶಃ ಹಾಗೂ ಲಕ್ಷ್ಮೀ ವಿಲಾಸ ಬ್ಯಾಂಕ್ ಎಟಿಎಂ ಸಂಪೂರ್ಣ ಸುಟ್ಟು ಹೋಗಿದೆ. ಲಕ್ಷಾಂತರ ರೂ. ಮೌಲ್ಯದ ಉಪಕರಣ, ಸಾಮಗ್ರಿಗಳಿಗೆ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಎಲ್ಲೋರಾ ಹೋಟೆಲ್ ಶ್ರೀಕಾಂತ ಗೋಕಾಕ ಎಂಬುವರಿಗೆ ಸೇರಿದ್ದಾಗಿದೆ.
ಇದನ್ನೂ ಓದಿ:ಮೇಜರ್ ಸರ್ಜರಿಗೆ ಮುಂದಾದ ಬಿಸಿಸಿಐ: ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ರೋಹಿತ್
Related Articles
ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಹಾಗೂ ಶಹರ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಹಾನಿ ತಪ್ಪಿಸಿದ್ದಾರೆ.