Advertisement

ಆಟೋಮೊಬೈಲ್‌ ಮಳಿಗೆಗೆ ಬೆಂಕಿ

12:40 AM Apr 30, 2019 | Team Udayavani |

ಬೆಂಗಳೂರು: ಶಾರ್ಟ್‌ ಸರ್ಕಿಟ್‌ನಿಂದ ಆಟೋಮೊಬೈಲ್‌ ಮಳಿಗೆಗೆ ಬೆಂಕಿ ಹೊತ್ತಿಕೊಂಡ ಘಟನೆ ರಾಜಾಜಿನಗರ ನಗರದ 2ನೇ ಹಂತದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

Advertisement

ಬೆಳಗ್ಗೆ 7 ಗಂಟೆ ಸುಮಾರಿಗೆ ಗಾಯತ್ರಿ ಆಟೋಮೊಬೈಲ್ಸ್‌ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಕರೆಗೆ ಸ್ಪಂದಿಸಿ, ನಾಲ್ಕು ಅಗ್ನಿ ಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ತೆರಳಿದ ಸಿಬ್ಬಂದಿ, ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಘಟನೆಯಲ್ಲಿ ಆಟೋಮೊಬೈಲ್‌ ಮಳಿಗೆಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next