ರಾಮನಗರ: ಇಲ್ಲಿನ ಬಿಡದಿಯ ಇನ್ನೊವೇಟಿವ್ ಫಿಲ್ಮ್ ಸಿಟಿಯಲ್ಲಿರುವ ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್‌ಬಾಸ್ ಮನೆಯಲ್ಲಿ ಗುರುವಾರ ನಸುಕಿನ 3 ಗಂಟೆಯ ವೇಳೆಗೆ ಭಾರೀ ಅಗ್ನಿ ಅವಘಡ ಸಂಭವಸಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಬಿಗ್ ಬಾಸ್ ಮನೆಯ ಪಕ್ಕದಲ್ಲಿರುವ ಮೇಣದ ಮ್ಯೂಸಿಯಂನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಮ್ಯೂಸಿಯಂ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಿಗ್ ಬಾಸ್ ಮನೆಯ ಎಡಿಟಿಂಗ್ ರೂಮ್‌ಗೂ ಬೆಂಕಿ ವ್ಯಾಪಿಸಿಕೊಂಡಿದೆ.
ಸ್ಥಳಕ್ಕೆ 5 ಕ್ಕೂ ಹೆಚ್ಚು ವಾಹನಗಳೊಂದಿಗೆ ದೌಡಾಯಿಸಿರುವ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಅವಘಡದಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.
Related Articles
ಇತ್ತೀಚಿಗಷ್ಟೇ ಬಿಗ್‌ಬಾಸ್ ಸೀಸನ್ 5 ಶೋ ಮುಕ್ತಾಯವಾಗಿತ್ತು.