Advertisement

West Bengal: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ಮೃತ್ಯು, ಹಲವರ ಸ್ಥಿತಿ ಗಂಭೀರ

12:46 PM Aug 27, 2023 | Team Udayavani |

ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಜಗನ್ನಾಥಪುರದಲ್ಲಿ ಸಂಭವಿಸಿದೆ.

Advertisement

ಘಟನೆಯು ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಐದು ಮಂದಿ ಗಂಭೀರ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಪಘಾತದಲ್ಲಿ ಕಾರ್ಖಾನೆ ಸಂಪೂರ್ಣ ಸುಟ್ಟು ಕರಕಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಆಗಮಿಸಿದ್ದಾರೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು ಕಾರ್ಖಾನೆಯಿಂದ ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Shah Rukh Khan: ಆನ್ಲೈನ್‌ ಗೇಮಿಂಗ್‌ ಪ್ರಚಾರ; ಶಾರುಖ್‌ ನಿವಾಸದ ಎದುರು ಪ್ರತಿಭಟನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next