Advertisement
ಗಂಗೊಳ್ಳಿ ಮೀನುಗಾರಿಕಾ ಬಂದರಿ ನಿಂದ ಮೀನುಗಾರಿಕೆ ತೆರಳಿದ್ದ ಶ್ರೀ ಸಿದ್ಧಿವಿನಾಯಕ ಹೆಸರಿನ ಮೀನು ಗಾರಿಕಾ ದೋಣಿಯು ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಕಡಲ ಅಲೆಗಳ ಹೊಡೆತಕ್ಕೆ ಸಿಲುಕಿ ಅಳಿವೆಯ ಮರಳಿನ ದಿಣ್ಣೆಗೆ ಬಡಿದು ಮಗುಚಿ ಬಿದ್ದಿದೆ ಎನ್ನಲಾಗಿದೆ.
Related Articles
ಅಳಿವೆ ಪ್ರದೇಶದಲ್ಲಿ ಹೂಳು ತುಂಬಿಕೊಂಡಿರುವುದರಿಂದ ಪ್ರತಿ ವರ್ಷ ಒಂದಲ್ಲ ಒಂದು ದುರಂತ ಅವಘಡ ಸಂಭವಿಸುತ್ತಿದ್ದು, ಮೀನುಗಾರರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ತುರ್ತಾಗಿ ಹೂಳೆತ್ತಬೇಕು ಮತ್ತು ಬಂದರಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಬ್ರೇಕ್ ವಾಟರ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ.
Advertisement