Advertisement
ರೌಡಿ ಯಶ್ವಂತರಾಯ, ಜಿಲ್ಲೆಯ ಕಮಲಾಪುರ ಮೂಲಕ ತಾಜಸುಲ್ತಾನಪುರಕ್ಕೆ ಬರುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಅರಿತು ಕಮಲಾಪುರದಲ್ಲಿ ರಸ್ತೆಗೆ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಆದರೆ ಬ್ಯಾರಿಕೇಡ್‌ಗಳಿಗೆ ಡಿಕ್ಕಿ ಹೊಡೆದು ಆತ ಮುಂದೆ ಬಂದಿದ್ದ. ತದನಂತರ ತಾವರಗೇರಾ ಕ್ರಾಸ್ ಬಳಿ ಪೊಲೀಸರು ಅಡ್ಡಗಟ್ಟಿ ವಾಹನ ತಡೆಯಲು ಯತ್ನಿಸಿದಾಗ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ. ಪೇದೆಗಳಾದ ಕುಶನ್ ಹಾಗೂ ಕುಪೇಂದ್ರ ಎನ್ನುವವರು ಈ ವೇಳೆ ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮೀಣ ಪಿಎಸ್‌ಐ ಚಂದ್ರಶೇಖರ ತಿಗಡಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ತಿಗಡಿ ಅವರು ಹಾರಿಸಿದ ಗುಂಡು ಯಶ್ವಂತರಾಯ ಎಡಕಾಲಿಗೆ ತಗುಲಿದೆ. ಗುಂಡು ತಗುಲಿದ ತಕ್ಷಣ ಸ್ಥಳದಲ್ಲಿಯೇ ಆತ ಕುಸಿದು ಬಿದ್ದಿದ್ದು, ವಶಕ್ಕೆ ಪಡೆಯಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಪೊಲೀಸರ ಹಾಗೂ ರೌಡಿಗಳ ನಡುವೆ ನಡೆದ 8ನೇ ಗುಂಡಿನ ದಾಳಿ ಪ್ರಕರಣ ಇದಾಗಿದೆ.
Advertisement
ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು
06:00 AM Dec 16, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.