Advertisement

ಚಿಕ್ಕಮಗಳೂರು: ಹಾಡುಹಗಲೇ ಜ್ಯುವೆಲರ್ಸ್ ಮಾಲಕನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು

02:43 PM Jul 11, 2020 | keerthan |

ಚಿಕ್ಕಮಗಳೂರು: ನಗರದಲ್ಲಿ ದುಷ್ಕರ್ಮಿಗಳು ಇಂದು ಹಾಡಹಗಲೇ ತಮ್ಮ ಪುಂಡಾಟ ತೋರಿದ್ದು, ಜ್ಯುವೆಲರ್ಸ್ ಮಾಲಕನೋರ್ವನ ಮೇಲೆ ರಿವಾಲ್ವರ್ ನಿಂದ ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್ ಜ್ಯುವೆಲರ್ಸ್ ಮಾಲಕ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.

Advertisement

ನಗರದ ಎಂ.ಜಿ. ರಸ್ತೆಯಲ್ಲಿ ಘಟನೆ ನಡೆದಿದ್ದು, ಪಲ್ಸರ್ ಬೈಕ್ ನಲ್ಲಿ ಬಂದ ಮೂವರು ಜ್ಯುವೆಲ್ಲರಿ ಅಂಗಡಿ ಮಾಲಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಮಾಲಕ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ.

ಮೂವರು ದುಷ್ಕರ್ಮಿಗಳು ಕೃತ್ಯವೆಸಗಿದ್ದು, ಚಿನ್ನಾಭರಣ ದರೋಡೆಗೆ ಬಂದಿರಬಹುದು ಎಂದು ಶಂಕಿಸಲಾಗಿದೆ. ದುಷ್ಕರ್ಮಿಗಳು ಫೈರಿಂಗ್ ನಡೆಸಿ ಪರಾರಿಯಾಗಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next