ಕಲಬುರಗಿ: ಬೆಳ್ಳಂಬೆಳಗ್ಗೆ ಕಲಬುರಗಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದ್ದು, ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಕಲಬುರಗಿ ಹೊರವಲಯದ ತಾಜ ಸುಲ್ತಾನಪೂರ ಬಳಿ ಘಟನೆ ನಡೆದಿದ್ದು, ಕೊಲೆ ಆರೋಪಿ ಮುಬಿನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕಳೆದ ಆಗಸ್ಟ್ 25ರಂದು ಕಲಬುರಗಿಯಲ್ಲಿ, ಉತ್ತರ ಪ್ರದೇಶ ಮೂಲದ ಯುವಕನ ಕೊಲೆ ಮಾಡಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಬಿನ್ ನನ್ನು ಪೊಲೀಸರು ಹುಡುಕಾಡುತ್ತಿದ್ದರು. ಇಂದು ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ಚಾಕು ಜಪ್ತಿಗೆ ಪೊಲೀಸರು ತೆರಳಿದ್ದರು.
ಇದನ್ನೂ ಓದಿ: ಹತ್ರಾಸ್ ಸಂತ್ರಸ್ಥೆ ಮತ್ತು ಆರೋಪಿ ಫೋನ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು: ಉ.ಪ್ರ ಪೊಲೀಸರು
ಈ ವೇಳೆ ಪೊಲಿಸರ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿ ಆರೋಪಿ ಮುಬಿನ್ ಓಡಿ ಹೋಗಲು ಯತ್ನಿಸಿದ್ದ. ಇದರಿಂದ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಗ್ರಾಮೀಣ ಠಾಣೆಯ ಪಿಐ ಗುಂಡು ಹಾರಿಸಿದ್ದಾರೆ.
ಈ ಘಟನೆಯಲ್ಲಿ ಕಲಬುರಗಿ ಗ್ರಾಮೀಣ ಠಾಣೆಯ ಪೊಲೀಸ್ ಠಾಣೆಯ ಇಬ್ಬರು ಪೇದೆಗಳು ಗಾಯಗೊಂಡಿದ್ದಾರೆ.ಇವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಲಿಸರ ಗುಂಡೇಟಿನಿಂದ ಗಾಯಗೊಂಡ ಕೊಲೆ ಆರೋಪಿ ಮುಬಿನ್ ನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಹಬ್ಬಗಳಿಗೆ ಮಾರ್ಗಸೂಚಿ: ಸಿನೆಮಾ ನಿಯಮ ಬಿಡುಗಡೆ ; ಆಯುರ್ವೇದ ಅನುಸರಣೆಗೆ ಸಲಹೆ
ಗಾಯಗೊಂಡ ಪೊಲೀಸ್
ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.