Advertisement

ಅರುಣ್ ಜೇಟ್ಲಿ ಕ್ರೀಡಾಂಗಣವಾಗಿ ಬದಲಾಗಲಿದೆ ದೆಹಲಿಯ ಫಿರೋಜ್ ಶಾ ಕೋಟ್ಲಾ ಸ್ಟೇಡಿಯಂ

09:35 AM Aug 28, 2019 | keerthan |

ಹೊಸದಿಲ್ಲಿ: ಇತ್ತೀಚೆಗೆ ನಿಧನ ಹೊಂದಿದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಗೌರವ ಪೂರ್ವಕವಾಗಿ ಅವರ ಹೆಸರನ್ನು ದೆಹಲಿಯ ಫಿರೋಜ್ ಶಾ ಕೋಟ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಇಡಲು ದಿಲ್ಲಿ ಕ್ರಿಕೆಟ್ ಅಸೋಸಿಯೇಶನ್ ನಿರ್ಧರಿಸಿದೆ. ಹೀಗಾಗಿ ಇನ್ನು ಮುಂದೆ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣ ಅರುಣ್ ಜೇಟ್ಲಿ ಕ್ರೀಡಾಂಗಣವಾಗಲಿದೆ.

Advertisement

ಸಪ್ಟೆಂಬರ್ 12ರಂದು ಜವಹರಲಾಲ್ ಸ್ಟೇಡಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಕ್ರೀಡಾ ಸಚಿವ ಕಿರಣ್ ರಿಜಜು ದೆಹಲಿ ಕ್ರಿಕೆಟ್ ಮೈದಾನಕ್ಕೆ ಮರುನಾಮಕರಣ ಮಾಡಲಿದ್ದಾರೆ.

ಕ್ರೀಡಾಂಗಣದ ಒಂದು ಸ್ಟ್ಯಾಂಡ್ ಗೆ ಭಾರತ ಕ್ರಿಕೆಟ್ ತಂಡದ ನಾಯಕ, ದೆಹಲಿ ಆಟಗಾರ ವಿರಾಟ್ ಕೊಹ್ಲಿಯ ಹೆಸರನ್ನು ಕೂಡಾ ಅದೇ ಕಾರ್ಯಕ್ರಮದಲ್ಲಿ ಇಡಲಾಗುವುದು.

1999ರಿಂದ 2003ರವರೆಗೆ ಅರುಣ್ ಜೇಟ್ಲಿ ದೆಹಲಿ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿದ್ದರು. ಇದೇ ವೇಳೆಯಲ್ಲಿ ಈ ಕ್ರೀಡಾಂಗಣದ ನವೀಕರಣ ಕೆಲಸ ನಡೆದಿತ್ತು. ಕ್ರೀಡಾಂಗಣದ ಡ್ರೆಸ್ಸಿಂಗ್ ರೂಮ್ ಅನ್ನು ವಿಶ್ವದರ್ಜೆಗೆ ಏರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next