ನವದೆಹಲಿ: ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭವಾಗಿದೆ.
ಆಪರೇಷನ್ ಕಾವೇರಿ ಅಡಿಯಲ್ಲಿ ಭಾರತೀಯರ ಮೊದಲ ತಂಡವು ಸುಡಾನ್‌ನಿಂದ ಹೊರಟಿದ್ದಾರೆ.
ಐಎನ್‌ಎಸ್ ಸುಮೇಧಾ ಹಡಗಿನಲ್ಲಿ 278 ಜನರು ಪೋರ್ಟ್ ಸುಡಾನ್‌ನಿಂದ ಸೌದಿ ಅರೇಬಿಯಾದ ಜೆಡ್ಡಾಕ್ಕೆ ಹೊರಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಸೇನೆ ಮತ್ತು ಅರೆಸೇನಾ ಗುಂಪಿನ ನಡುವೆ ಭೀಕರ ಕಾಳಗ ನಡೆಯುತ್ತಿರುವ ಸುಡಾನ್‌ನಿಂದ ಸ್ಥಳಾಂತರಿಸಿದ ಭಾರತೀಯರ ಗುಂಪಿನಲ್ಲಿ ಮಕ್ಕಳೂ ಸೇರಿದ್ದಾರೆ.
Related Articles
ಸೇನೆ ಮತ್ತು ಅರೆಸೇನಾ ಪಡೆಗಳ ಮಧ್ಯೆ ಸಂಘರ್ಷ ನಡೆಯುತ್ತಿರುವ ಸುಡಾನ್‌ನಲ್ಲಿ ಕನ್ನಡಿಗರೂ ಸೇರಿದಂತೆ ನೂರಾರು ಮಂದಿ ಭಾರತೀಯರು ಸಿಲುಕಿದ್ದಾರೆ.
ಸುಡಾನ್‌ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ಆಪರೇಷನ್ ಕಾವೇರಿ ಕಾರ್ಯಾಚರಣೆ ನಡೆಸಲಾಗುತ್ತಿದೆ.