Advertisement
ಮೊದಲ ಹಂತದಲ್ಲಿ ಏ.18ರಂದು ಮತದಾನ ನಡೆಯಲಿರುವ ದಕ್ಷಿಣ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಗಳವಾರ ದಕ್ಷಿಣ ಕನ್ನಡದಲ್ಲಿ ಒಬ್ಬ ಅಭ್ಯರ್ಥಿಯಿಂದ 1 ನಾಮಪತ್ರ, ಮಂಡ್ಯ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ 3 ಪ್ರತ್ಯೇಕ ಪಕ್ಷಗಳಿಂದ ಮೂರು ನಾಮಪತ್ರ, ಮೈಸೂರು ಕ್ಷೇತ್ರದಿಂದ ಮೂವರು ಅಭ್ಯರ್ಥಿಗಳು ಆರು ನಾಮಪತ್ರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಒಬ್ಬ ಪಕ್ಷೇತರ ಅಭ್ಯರ್ಥಿ ಒಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಮಾ.26 ಕೊನೇ ದಿನಾಂಕವಾಗಿದ್ದು, ಮಾ.27ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರವಾಪಸ್ ಪಡೆದುಕೊಳ್ಳಲು ಮಾ.29 ಕೊನೇ ದಿನವಾಗಿದ್ದು, ಏ.18ರಂದು ಮತದಾನ ನಡೆಯಲಿದೆ ಎಂದು ಮುಖ್ಯ
ಚುನಾವಣಾಧಿಕಾರಿ ಸಂಜೀವ ಕುಮಾರ್ ಮಾಹಿತಿ ನೀಡಿದರು.