ಇಂಫಾಲ್/ನವದೆಹಲಿ: ಮಣಿಪುರಕ್ಕೆ ಇದೇ ಮೊದಲ ಬಾರಿಗೆ ಸರಕು ಸಾಗಣೆಯ ರೈಲು Rani Gaidinliu ರೈಲ್ವೇ ನಿಲ್ದಾಣಕ್ಕೆ ಆಗಮಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.
Advertisement
ಇದರಿಂದಾಗಿ ಮಣಿಪುರಕ್ಕೆ ಹೆಚ್ಚಿನ ರೀತಿಯಲ್ಲಿ ಸರಕು ಸಾಗಣೆಗೆ ಮತ್ತು ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಗೂಡ್ಸ್ ರೈಲಿನ ಸಂಚಾರ ಶುರುವಾದ ಕಾರಣ ಮಣಿಪುರದ ಸರಕುಗಳನ್ನು ದೇಶದ ಇತರ ಭಾಗಗಳಿಗೆ ತಲುಪಿಸಲು ನೆರವಾಗಲಿದೆ ಎಂದೂ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ರೈಲ್ವೇ ಮಾರ್ಗಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ.
Related Articles
Advertisement