Advertisement

ಮೊದಲ ಹಂತದ ಫಲಾನುಭವಿಗಳ ಪಟ್ಟಿ ಸಿದ್ಧ

05:41 PM Nov 27, 2020 | Suhan S |

ದಾವಣಗೆರೆ: ಕೋವಿಡ್‌-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್‌ ಲಸಿಕೆಯನ್ನು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ವಿತರಿಸಲು ಬೇಕಿರುವ ಎಲ್ಲಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಮೊದಲ ಹಂತದ10,115 ಫಲಾನುಭವಿಗಳ ಪಟ್ಟಿ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಹೇಳಿದರು.

Advertisement

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಜಿಲ್ಲಾ ಆರೋಗ್ಯ ಅಭಿಯಾನ ಕಾರ್ಯಕಾರಿ ಸಮಿತಿ ಸಭೆ ಹಾಗೂ ಆರೋಗ್ಯಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕೋವಿಡ್‌ ತಡೆಗೆ ಎಲ್ಲ ಹಂತಗಳ ಪ್ರಯೋಗದಬಳಿಕ ಯಶಸ್ವಿಯಾಗಿ ಬಳಸಬಹುದಾದ ಲಸಿಕೆಶೀಘ್ರ ಪೂರೈಕೆಯಾಗುವ ಸಾಧ್ಯತೆಗಳಿದ್ದು, ಸರ್ಕಾರದನಿರ್ದೇಶನದಂತೆ ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ನೀಡಬೇಕಿದೆ. ಹೀಗಾಗಿ ಜಿಲ್ಲೆಯಲ್ಲಿ ಖಾಸಗಿ ಹಾಗೂಸರ್ಕಾರಿ ಆಸ್ಪತ್ರೆಗಳು, ಮೆಡಿಕಲ್‌ ಕಾಲೇಜು, ನರ್ಸಿಂಗ್‌ಹೋಂಗಳು, ಪ್ಯಾರಾ ಮೆಡಿಕಲ್‌ ಸೇರಿದಂತೆ ಆರೋಗ್ಯಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ವೈದ್ಯರು, ನರ್ಸ್‌ಗಳು,ಸಿಬ್ಬಂದಿಗಳು, ಪ್ರಯೋಗಶಾಲಾ ತಂತ್ರಜ್ಞರು ಸೇರಿದಂತೆಎಲ್ಲ ಆಶಾ ಕಾರ್ಯಕರ್ತರಿಗೆ ಮೊದಲು ಲಸಿಕೆ ನೀಡಲುಅಂಕಿ ಅಂಶಗಳನ್ನು ಸಂಗ್ರಹಿಸುವುದು, ಲಸಿಕೆ ದಾಸ್ತಾನು ಹಾಗೂ ವಿತರಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ನಿಗದಿತ ಕಾಲಮಿತಿಯೊಳಗೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಮೀನಾಕ್ಷಿ ಮಾಹಿತಿ ನೀಡಿ, ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಜಿಲ್ಲೆಯ 100 ಸರ್ಕಾರಿ ಆಸ್ಪತ್ರೆಗಳು, 450 ಖಾಸಗಿ ಆಸ್ಪತ್ರೆಗಳು, ನರ್ಸಿಂಗ್‌ ಹೋಂಗಳು,ಮೆಡಿಕಲ್‌ ಕಾಲೇಜುಗಳ ಬೋಧಕರು, ವಿದ್ಯಾರ್ಥಿಗಳು, ಸಿಬ್ಬಂದಿ, ಪ್ರಯೋಗಶಾಲಾ ತಂತ್ರಜ್ಞರು, ಗ್ರೂಪ್‌-ಡಿ,ಚಾಲಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಖಾಸಗಿ ಸಂಸ್ಥೆಗಳ 6230 ಜನಹಾಗೂ ಸರ್ಕಾರಿಸಂಸ್ಥೆಗಳ 3885 ಸೇರಿದಂತೆ ಒಟ್ಟು 10,115 ಜನರ ಪಟ್ಟಿಯನ್ನು ಮೊದಲ ಹಂತದ ಫಲಾನುಭವಿಗಳೆಂದು ಗುರುತಿಸಿ ಸರ್ಕಾರಕ್ಕೆ ಪಟ್ಟಿ ಸಲ್ಲಿಸಲಾಗಿದೆ. ಅಲ್ಲದೆಲಸಿಕೆಯನ್ನು ನೀಡಲು ಲಸಿಕಾಕರ್ತರನ್ನು ಕೂಡ ಗುರುತಿಸಲಾಗಿದ್ದು, ಸರ್ಕಾರಿ ಸಂಸ್ಥೆಗಳ 983, ಖಾಸಗಿ ಸಂಸ್ಥೆಗಳ 1889 ಜನ ಲಸಿಕಾಕರ್ತರ ಪಟ್ಟಿ ಸಿದ್ಧವಾಗಿದೆ.ಲಸಿಕೆ ದಾಸ್ತಾನು ಮಾಡಲು ಸರ್ಕಾರಿ ಸಂಸ್ಥೆಗಳ105 ಡೀಪ್‌ ಕೋಲ್ಡ್‌ ಸ್ಟೋರೇಜ್‌ಗಳನ್ನು ಕೂಡಸಿದ್ಧವಾಗಿರಿಸಲಾಗಿದೆ. ಪಶುಸಂಗೋಪನೆ ಇಲಾಖೆಗೆ ಸಂಬಂಧಿಸಿದ 09 ಕೋಲ್ಡ್‌ ಸ್ಟೋರೇಜ್‌ಗಳು ಹಾಗೂ02 ವಾಕ್‌ ಇನ್‌ ಕೂಲರ್‌ಗಳು ಕೂಡ ಲಭ್ಯವಿದ್ದು, ಅಗತ್ಯವೆನಿಸಿದರೆ ಬಳಕೆಗೆ ನೀಡಲು ಇಲಾಖೆ ಸಿದ್ಧವಿದೆ. ದಾವಣಗೆರೆ ಜಿಲ್ಲೆಗೆ ಚಿತ್ರದುರ್ಗ ಜಿಲ್ಲೆಯಿಂದ ಲಸಿಕೆ ಪೂರೈಕೆಯಾಗುವಂತೆ ಆರೋಗ್ಯ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಅಪೌಷ್ಠಿಕ ಮಕ್ಕಳ ಆರೋಗ್ಯ ತಪಾಸಣೆ: ಜಿಲ್ಲೆಯಲ್ಲಿ ಈ ವರ್ಷ ಅಕ್ಟೋಬರ್‌ ತಿಂಗಳ ಅಂತ್ಯದವರೆಗೆ 1,18,312 ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗಿದೆ. ಇದರಲ್ಲಿ 108914 ಮಕ್ಕಳ ತೂಕ ಸಾಮಾನ್ಯ, 9166 ಮಕ್ಕಳು ಸಾಧಾರಣ ತೂಕ ಹೊಂದಿದ್ದರೆ, 232 ಮಕ್ಕಳು ಅತಿ ಕಡಿಮೆತೂಕ ಹೊಂದಿದ್ದರು. 232ಅಪೌಷ್ಠಿಕ ಮಕ್ಕಳನ್ನು ನಿಯಮಾನುಸಾರ ಆಸ್ಪತ್ರೆಗೆ ದಾಖಲಿಸಿ, ಮಕ್ಕಳಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳದಿರಲು ಲಾಕ್‌ ಡೌನ್‌ ಕಾರಣವಾಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಅಪೌಷ್ಠಿಕ ಮಕ್ಕಳನ್ನು ಕೂಡಲ ಸಂಬಂಧಪಟ್ಟ ಸರ್ಕಾರಿ ಆಸ್ಪತ್ರೆಗಳಿಗೆ ನಿಯಮಾನುಸಾರ ಕರೆದುಕೊಂಡು ಹೋಗಿ ದಾಖಲಿಸುವ ಜವಾಬ್ದಾರಿ ಆಯಾ ಅಂಗನವಾಡಿ ಕಾರ್ಯಕರ್ತರು ಹಾಗೂ ಮೇಲ್ವಿಚಾರಕರದ್ದಾಗಿದೆ. ಹೀಗೆ ದಾಖಲಿಸುವ ಮಕ್ಕಳ ಆರೋಗ್ಯ ಸುಧಾರಣೆಯಾಗುವವರೆಗೂ ಇದರ ಮೇಲುಸ್ತುವಾರಿಯನ್ನು ಇವರು ನೋಡಿಕೊಳ್ಳಬೇಕು. ಇದರಲ್ಲಿ ವಿಫಲರಾಗುವ ಅಂಗನವಾಡಿ ಕಾರ್ಯಕರ್ತೆ, ಮೇಲ್ವಿಚಾರಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

Advertisement

1500 ಕ್ಷಯರೋಗಿಗಳ ಪತ್ತೆ: ಜಿಲ್ಲೆಯಲ್ಲಿ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಈ ವರ್ಷ ಒಟ್ಟು 1500 ಹೊಸ ಕ್ಷಯರೋಗಿಗಳನ್ನು ಪತ್ತೆ ಮಾಡಲಾಗಿದ್ದು ಅವರ ಮನೆಗಳಿಗೆ ಔಷಧ ವಿತರಿಸುವ ಕಾರ್ಯ ನಡೆದಿದೆ. ಅಲ್ಲದೆ ಈ ವರ್ಷ ಜಿಲ್ಲೆಯ ಜನಸಂಖ್ಯೆಯಲ್ಲಿ ಶೇ. 30ರಷ್ಟು ಅಂದರೆ ಸುಮಾರು 4 ಲಕ್ಷ ಜನರನ್ನು ಪರೀಕ್ಷೆಗೆ ಒಳಪಡಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಗಂಗಾಧರ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ನಾಗರಾಜ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ,ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಮುರಳಿಧರ್‌, ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನಟರಾಜ್‌ ಸೇರಿದಂತೆ ವಿವಿಧ ಕಾರ್ಯಕ್ರಮಅನುಷ್ಠಾನಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳುಭಾಗವಹಿಸಿದ್ದರು. ಕ್ಷಯರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಆರೋಗ್ಯಇಲಾಖೆ ಸಿದ್ಧಪಡಿಸಲಾದ ಪೋಸ್ಟರ್‌, ಬ್ಯಾನರ್‌ಗಳನ್ನುಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next