Advertisement

4-5 ದಿನಗಳಲ್ಲಿ ಜೆಡಿಎಸ್‌ ಮೊದಲ ಪಟ್ಟಿ: ಎಚ್‌ಡಿಕೆ

04:45 AM Jul 19, 2017 | Team Udayavani |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ 4-5 ದಿನಗಳಲ್ಲಿ ಅಂತಿಮವಾಗಲಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಹೀಗಾಗಿ, ಒಮ್ಮತದ ಅಭ್ಯರ್ಥಿ ಆಯ್ಕೆಗೆ ನಿರಂತರ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Advertisement

ದೇವೇಗೌಡರು ಮೊನ್ನೆ ದಿಢೀರ್‌ ದಿಲ್ಲಿಗೆ ಹೋಗಿದ್ದರಿಂದ ಸಭೆ ನಡೆಸಲು ಆಗಿರಲಿಲ್ಲ. ಇಂದು ಸಭೆ ನಡೆಸಿ ಆಕಾಂಕ್ಷಿಗಳ ಜತೆ ಚರ್ಚೆ ನಡೆಸಲಾಗಿದೆ. ಶೀಘ್ರವೇ ಮೊದಲ ಹಂತದ ಪಟ್ಟಿ ಸಿದ್ಧವಾಗಲಿದೆ. ಆಕಾಂಕ್ಷಿಗಳು ಹೆಚ್ಚಾಗಿರುವ ಕಡೆ ಪರಸ್ಪರ ಮಾತುಕತೆ ಮೂಲಕ ಸಂಧಾನ ನಡೆಸಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next