ನವದೆಹಲಿ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕಪಾಲ ವ್ಯವಸ್ಥೆ ಜಾರಿಯ ಪ್ರಮುಖ ಹೆಜ್ಜೆಯಾಗಿರುವ ಲೋಕಪಾಲರ ನೇಮಕದ ಅಂತಿಮ ಪ್ರಕ್ರಿಯೆ ಪೂರ್ಣ ಗೊಂಡಿದ್ದು, ಆಯ್ಕೆ ಸಮಿತಿಯು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಹೆಸರನ್ನು ಅಂತಿಮಗೊಳಿಸಿದೆ. ಸೋಮವಾರ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆಯಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯ ಮೂರ್ತಿ ರಂಜನ್ ಗೊಗೋಯ್, ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಹಾಗೂ ಜ್ಯೂರಿಸ್ಟ್‌ರನ್ನು ಒಳಗೊಂಡ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಈಗಾಗಲೇ ಲೋಕ ಪಾಲ ಶೋಧ ಸಮಿತಿಯು ಪಟ್ಟಿ ಮಾಡಿದ 10 ಸಂಭಾವ್ಯ ಅಭ್ಯರ್ಥಿಗಳ ಪೈಕಿ ಜಸ್ಟೀಸ್ ಘೋಷ್ ಪ್ರಮುಖ
ವ್ಯಕ್ತಿಯಾಗಿದ್ದರು.
2017ರ ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್ ನಿಂದ ನಿವೃತ್ತರಾದ ಘೋಷ್, ಸದ್ಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದಾರೆ.