Advertisement

ಮೊದಲ ಏಕದಿನ: ಪದಾರ್ಪಣೆ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಔಟಾದ ಮಯಾಂಕ್, ಶಾ: ಕೊಹ್ಲಿ ಅರ್ಧಶತಕ

09:20 AM Feb 06, 2020 | Team Udayavani |

ಹ್ಯಾಮಿಲ್ಟನ್: ಸೆಡಾನ್ ಪಾರ್ಕ್ ನಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆರಂಭಿಕ ಆಘಾತ ಅನುಭವಿಸಿದ್ದು , 50ರನ್ ಆಗುವಷ್ಟರಲ್ಲಿ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿದೆ.

Advertisement

ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಭಾರತದ ನೂತನ ಆರಂಭಿಕ ಜೋಡಿ ಮಯಾಂಕ್ ಮತ್ತು ಪೃಥ್ವಿ ಶಾ ಭರವಸೆ ಮೂಡಿಸುವಲ್ಲಿ ವಿಫಲವಾಗಿದ್ದು ಅಲ್ಪ ಮೊತ್ತಕ್ಕೆ ಔಟಾಗಿದ್ದಾರೆ.  21 ಎಸೆತಗಳಲ್ಲಿ 3 ಬೌಂಡರಿ ಸೇರಿ 20 ರನ್ ದಾಖಲಿಸಿದ್ದ ಪೃಥ್ವಿ ಶಾ  8ನೇ ಓವರ್ ನಲ್ಲಿ ಗ್ರ್ಯಾಂಡ್ ಹೋಮ್  ಎಸೆತಕ್ಕೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಮಯಾಂಕ್ ಕೂಡ 32 ರನ್ ಗಳಿಸಿ ನಿರ್ಗಮಿಸಿದರು. ಓಪನರ್ ಗಳಾಗಿ ಕಣಕ್ಕಿಳಿದ ಇವರಿಬ್ಬರು ಅರ್ಧಶತಕದ ಜೊತೆಯಾಟ ನೀಡಿದ್ದಾರೆ.

ಸದ್ಯ ಶ್ರೇಯಸ್ ಐಯ್ಯರ್ ಹಾಗೂ ಕೆ.ಎಲ್ ರಾಹುಲ್ ಕ್ರೀಸ್​ನಲ್ಲಿದ್ದಾರೆ. ನಾಯಕ ಕೊಹ್ಲಿ 51 ರನ್ ಗಳಿಸಿ ಐಶ್ ಸೋಧಿಗೆ ವಿಕೆಟ್ ಒಪ್ಪಿಸಿದ್ದಾರೆ, ಅಯ್ಯರ್ 40 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

ನ್ಯೂಜಿಲ್ಯಾಂಡ್ ಪರ ಟಿಮ್ ಸೌಥಿ, ಐಶ್ ಸೋಧಿ ಹಾಗೂ ಕಾಲಿನ್ ಡಿ ಗ್ಗ್ರ್ಯಾಂಡ್ ಹೋಮ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.

ನ್ಯೂಜಿಲೆಂಡ್ ಪರ ಖಾಯಂ ನಾಯಕ ಕೇನ್ ವಿಲಿಯಮ್ಸನ್ ಇಂಜುರಿಯಿಂದ ಗುಣಮುಖರಾಗದ ಕಾರಣ ಇಂದಿನ ಪಂದ್ಯದಲ್ಲೂ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ತಂಡವನ್ನು ಟಾಮ್ ಲೇಥಮ್ ಮುನ್ನಡೆಸುತ್ತಿದ್ದಾರೆ.

Advertisement

ಇತ್ತ ಭಾರತ ಪರ ಮಯಾಂಕ್ ಅಗರ್ವಾಲ್ ಹಾಗೂ ಪೃಥ್ವಿ ಶಾ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. ಕರ್ನಾಟಕದ ಮನೀಶ್ ಪಾಂಡೆ ಅವರನ್ನು ಕೈಬಿಟ್ಟು ಇವರ ಬದಲು ಕೇದಾರ್ ಜಾಧವ್ ಆಡುವ ಅವಕಾಶ ಗಿಟ್ಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next