Advertisement

ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ

04:05 PM Jun 05, 2021 | Team Udayavani |

ಪುಂಜಾಲಕಟ್ಟೆ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳ ತಾಲೂಕಿನ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ (ಜೂ.5) ಲೋಕಾರ್ಪಣೆ ಗೊಂಡಿತು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನೂತನ ಘಟಕವನ್ನು ಉದ್ಘಾಟಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ  ಕೊರೋನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ ಎಂದರು.

ಬಂಟ್ವಾಳದಲ್ಲಿ ಕೊರೋನಾ ವಿರುದ್ಧದ ಹೋರಾಟ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಂಸದರಾದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಕ್ ಹಾಗೂ ಅಧಿಕಾರಿ ವೃಂದದ ಶ್ರಮವನ್ನು ಅವರು ಶ್ಲಾಘಿಸಿದರಲ್ಲದೆ ಸರಕಾರದ ಮತ್ತು ಜಿಲ್ಲಾಡಳಿತದ ಪರವಾಗಿ ಅಭಿನಂದಿಸಿದರು.

ಈ ಘಟಕದಲ್ಲಿ ಪ್ರತಿ ನಿಮಿಷಕ್ಕೆ 46 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿಯೂ ಹಂತ ಹಂತವಾಗಿ ಆಕ್ಸಿಜನ್ ಉತ್ಪಾದನ  ಘಟಕ ಸ್ಥಾಪನೆಯಾಗಲಿದೆ  ಎಂದವರು ಹೇಳಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ,  ಜಿ.ಪ. ಸದಸ್ಯ ಎಂ.ತುಂಗಪ್ಪ ಬಂಗೇರ, ನೀರು ಸರಬರಾಜು ಮತ್ತು ಒಳಚರಂಡಿ  ನಿಗಮದ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ತಾ.ಪಂ.ಸದಸ್ಯ ಪ್ರಭಾಕರ ಪ್ರಭು,  ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ,ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ,  ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷೆ ಸುಜಾತ ಆರ್.ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ,ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ,ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ,  ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್,    ತಹಶಿಲ್ದಾರ್ ರಶ್ಮೀ ಎಸ್. ಆರ್, ಎಂಜಿನಿಯರ್ ಕೃಷ್ಣ, ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿ ಜಯಪ್ರಕಾಶ್, ಆರೋಗ್ಯ ಕೇಂದ್ರದ ವೈದ್ಯರಾದ ಡಾ.ನಿತೀಶ್, ಡಾ.ಜವಾಬುಲ್ಲ, ಡಾ.ವಸುಧಾ, ಡಾ.ಅಕ್ಷತಾ, ಪುಂಜಾಲಕಟ್ಟೆ ಪ್ರಾ.ಕೇಂದ್ರದ ಆಯುಷ್ ವೈದ್ಯಾಧಿಕಾರಿ ಡಾ. ಸೋಹನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Advertisement

ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಸ್ವಾಗತಿಸಿ,ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next