Advertisement
ನಾಳೆ (ಎ. 18) ಈ 14 ಕ್ಷೇತ್ರಗಳಲ್ಲಿ ಮತ ದಾನ ನಡೆಯಲಿರುವ ಹಿನ್ನೆಲೆಯಲ್ಲಿ ಕೊನೆಯ ಕ್ಷಣದ ಪ್ರಚಾರದಲ್ಲಿ ಹೆಚ್ಚುಕಡಿಮೆ ಎಲ್ಲ ನಾಯಕರು ಬ್ಯುಸಿಯಾಗಿದ್ದರು. ಮಂಗಳವಾರ ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಬಿಡುವಿಲ್ಲದ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದರು.
ಸಿದ್ದರಾಮಯ್ಯ ಅವರು ಕೊಳ್ಳೇಗಾಲ ಮತ್ತು ಟಿ. ನರಸೀಪುರ, ನರಸಿಂಹರಾಜ ಕ್ಷೇತ್ರಗಳಲ್ಲಿ ಪ್ರಚಾರ ಸಭೆ ನಡೆಸಿ ಮೈತ್ರಿಕೂಟ ಅಭ್ಯರ್ಥಿಗಳ ಪರ ಮತ ಯಾಚಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಹ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಕೊನೇ ದಿನ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬೆಂಗ ಳೂರು ಸೆಂಟ್ರಲ್ ಸಹಿತ ಬೆಂಗಳೂರಿನ ಕ್ಷೇತ್ರಗಳಲ್ಲಿ ಪಾಲ್ಗೊಂಡು ಮೈತ್ರಿಕೂಟ ಅಭ್ಯರ್ಥಿಗಳ ಪರ ಪ್ರಚಾರ ಮತಯಾಚನೆ ನಡೆಸಿದರು. ಮೈಸೂರು, ಮಂಡ್ಯ, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಕ್ಷೇತ್ರಗಳಲ್ಲಿ ಹೆಚ್ಚಿನ ನಾಯಕರು ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು.
Related Articles
Advertisement
ಎಲ್ಲೆಲ್ಲಿ ಮೊದಲ ಹಂತ?ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜ ನಗರ ಮತ್ತು ಹಾಸನ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ಎರಡನೇ ಹಂತದಲ್ಲಿ ಎ. 23ರಂದು ಮತದಾನ ನಡೆಯುವ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳತ್ತ ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಮುಖ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಹ ಆ ಕ್ಷೇತ್ರಗಳಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.