Advertisement
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ 6ನೇ ಸೆಮಿಸ್ಟರ್‌ನಲ್ಲಿ ಬಾಕಿ ಇರುವ ತರಗತಿಗಳನ್ನು ಶೀಘ್ರ ಪೂರ್ಣಗೊಳಿಸಿ ಶೀಘ್ರ ಪರೀಕ್ಷೆ ನಡೆಸಲು ವಿ.ವಿ. ತೀರ್ಮಾನಿಸಿದೆ. ಸೆಪ್ಟಂಬರ್ ಕೊನೆಯಲ್ಲಿ ಪರೀಕ್ಷೆ ಆರಂಭವಾದರೆ 10 ದಿನದೊಳಗೆ ಪೂರ್ಣಗೊಳಿಸಿ, ಬಳಿಕ 15 ದಿನದೊಳಗೆ ಮೌಲ್ಯಮಾಪನ ಮುಗಿಸಿ ಅಕ್ಟೋಬರ್ ಮಧ್ಯಭಾಗದಲ್ಲಿ ಫಲಿತಾಂಶ ಪ್ರಕಟಿಸಬಹುದು ಎಂಬುದು ವಿ.ವಿ.ಯ ಚಿಂತನೆ.
Related Articles
Advertisement
1ನೇ ಸೆಮಿಸ್ಟರ್ ಅಂಕವು 2ನೇ ಸೆಮಿಸ್ಟರ್‌ಗೆ ಭಡ್ತಿಗೆ ಹಾಗೂ 3ನೇ ಸೆಮಿಸ್ಟರ್ ಅಂಕವು 4ನೇ ಸೆಮಿಸ್ಟರ್‌ಗೆ ಭಡ್ತಿಗೆ ಮಾತ್ರ ಅಗತ್ಯ. ಈ ವಿದ್ಯಾರ್ಥಿಗಳು ಮುಂದಿನ ಶಿಕ್ಷಣವನ್ನು ಅದೇ ಕಾಲೇಜಿನಲ್ಲಿ ಮುಂದು ವರಿಸುವ ಕಾರಣ ಮೌಲ್ಯಮಾಪನದ ತುರ್ತು ಇಲ್ಲ. ಆದರೆ 6ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಮುಂದಿನ ಶಿಕ್ಷಣಕ್ಕಾಗಿ ಬೇರೆಡೆ ತೆರಳುವ ಕಾರಣ ಹಾಗೂ 5ನೇ ಸೆಮಿಸ್ಟರ್ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಅದನ್ನು ಮೊದಲು ಪೂರ್ಣಗೊಳಿಸಬೇಕು ಎಂಬುದು ವಿ.ವಿ.ಯ ನಿರ್ಧಾರ.
ಆನ್ಲೈನ್ ಪರೀಕ್ಷೆ ಇಲ್ಲ :
6ನೇ ಸೆಮಿಸ್ಟರ್ ಪರೀಕ್ಷೆಯನ್ನು ಆನ್‌ಲೈನ್ ಮೂಲಕ ನಡೆಸುವ ಬಗ್ಗೆ ವಿ.ವಿ. ಈ ಹಿಂದೆ ಚಿಂತಿ ಸಿತ್ತು. ಆದರೆ ಗ್ರಾಮಾಂತರದಲ್ಲಿ ನೆಟ್‌ವರ್ಕ್ ಸಮಸ್ಯೆ/ತಾಂತ್ರಿಕ ತೊಂದರೆಯ ಹಿನ್ನೆಲೆಯಲ್ಲಿ ಆಫ್‌ಲೈನ್ ಪರೀಕ್ಷೆಯ ಮೊರೆಹೋಗಿದೆ.
6ನೇ ಸೆಮಿಸ್ಟರ್ ತರಗತಿ ಮಾಡಿ ಪರೀಕ್ಷೆ ನಡೆಸಿ 6 ಹಾಗೂ 5ನೇ ಸೆಮಿಸ್ಟರ್ ಮೌಲ್ಯಮಾಪನ ಮುಗಿ ಸಲು ಪ್ರಾಂಶುಪಾಲರ ಸಭೆಯಲ್ಲಿ ನಿರ್ಧರಿಸ ಲಾಗಿದೆ. ಅದರಂತೆ ಸದ್ಯ ಇತರ ಸೆಮಿಸ್ಟರ್‌ಗಳ ಮೌಲ್ಯ ಮಾಪನವನ್ನು ಸ್ಥಗಿತಗೊಳಿಸಲಾಗಿದೆ. 6ನೇ ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಶೀಘ್ರ ಪ್ರಕಟಿಸಲಾಗುವುದು. – ಪ್ರೊ| ಪಿ.ಎಸ್. ಯಡಪಡಿತ್ತಾಯ, ಮಂಗಳೂರು ವಿ.ವಿ. ಕುಲಪತಿ