Advertisement

First PU Result: ಪ್ರಥಮ ಪಿಯು ಫ‌ಲಿತಾಂಶ ಪ್ರಕಟ

11:51 PM Mar 30, 2024 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗಿದೆ.

Advertisement

ಕಾಲೇಜು ಹಂತದಲ್ಲಿಯೇ ಪರೀಕ್ಷೆ ನಡೆಸಿ ಕಾಲೇಜು ಹಂತದಲ್ಲೇ ಮೌಲ್ಯಮಾಪನ ನಡೆಸಿ ಕಾಲೇಜು ಹಂತದಲ್ಲೇ ಫಲಿತಾಂಶವನ್ನು ನೀಡಲಾಗಿದೆ. ಆದ್ದರಿಂದ ಪ್ರಥಮ ಪಿಯುಸಿ ಫ‌ಲಿತಾಂಶದ ಕ್ರೋಢೀಕೃತ ದತ್ತಾಂಶಗಳು ನಮ್ಮಲ್ಲಿ ಲಭ್ಯವಿಲ್ಲವೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮೇ 20ರಿಂದ 31ರ ವರೆಗೆ ಪೂರಕ ಪರೀಕ್ಷೆ  ನಡೆಸಲಾಗುತ್ತದೆ. ಪೂರಕ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪ ನಿರ್ದೇಶಕರಿಗೆ ವಹಿಸಿದೆ. ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿಯನ್ನು ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಎಪ್ರಿಲ್‌ 20 ಕೊನೆಯ ದಿನವಾಗಿದೆ. ಜೂ.6ರಂದು ಪರೀಕ್ಷೆಯ ಫ‌ಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next