ಚತ್ತೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಭಾರೀ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಬಾಂಗ್ಲಾ ತಂಡವು ಕೇವಲ 150 ರನ್ ಗಳಿಗೆ ಆಲೌಟಾಗಿದ್ದು, ಭಾರತ 254 ರನ್ ಮುನ್ನಡೆ ಸಾಧಿಸಿದೆ.
ಭಾರತದ 404 ರನ್ ಗೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಶಕೀಬ್ ಪಡೆ ಎರಡನೇ ದಿನದಾಟದ ಅಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತ್ತು. ಇಂದು ಆಟ ಮುಂದುವರಿಸಿ 150 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಅಜೇಯರಾಗಿದ್ದ ಮೆಹಿದಿ ಹಸನ್ ಮಿರಾಜ್ 25 ರನ್ ಗಳಿಸಿದರೆ, ಇಬಾದತ್ ಹುಸೈನ್ 17 ರನ್ ಮಾಡಿದರು.
ಭಾರತದ ಪರ ಬಿಗು ದಾಳಿ ಸಂಘಟಿಸಿದ ಕುಲದೀಪ್ ಯಾದವ್ ಐದು ವಿಕೆಟ್ ಪಡೆದರೆ, ಸಿರಾಜ್ ಮೂರು, ಅಕ್ಷರ್ ಮತ್ತು ಉಮೇಶ್ ತಲಾ ಒಂದು ವಿಕೆಟ್ ಪಡೆದರು.
ಇದನ್ನೂ ಓದಿ:2,500 ವರ್ಷಗಳಷ್ಟು ಹಳೆಯ ಸಂಸ್ಕೃತ ಸಮಸ್ಯೆ ಬಗೆಹರಿಸಿದ ಭಾರತೀಯ ವಿದ್ಯಾರ್ಥಿ
254 ರನ್ ಮುನ್ನಡೆಯಿದ್ದರೂ ಭಾರತವು ಫಾಲೋ ಆನ್ ಹೇರದೆ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದೆ.