Advertisement
ಗುದನಾಳದ ಕ್ಯಾನ್ಸರ್‌ಗೆ ತುತ್ತಾಗಿದ್ದ ಸುಮಾರು 18 ರೋಗಿಗಳಿಗೆ ಕಳೆದ 6 ತಿಂಗಳಿಂದ “ಡೋಸ್ಟರ್‌ಲಿಮಾಬ್’ ಎಂಬ ಔಷಧವನ್ನು ಪರೀಕ್ಷಾರ್ಥವಾಗಿ ನೀಡಲಾಗುತ್ತಿತ್ತು. ಚಿಕಿತ್ಸೆಯ ಕೊನೆಯ ಹಂತದಲ್ಲಿ ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಎಲ್ಲ 18 ಮಂದಿಯಲ್ಲೂ ಕ್ಯಾನ್ಸರ್ ನಿರ್ಮೂಲನೆಯಾಗಿದೆ. ಶಾರೀರಿಕ ಪರೀಕ್ಷೆ, ಎಂಡೋಸ್ಕೋಪಿ, ಪಾಸಿಟ್ರನ್ ಎಮಿಷನ್ ಟೋಮೋಗ್ರಫಿ ಅಥವಾ ಪಿಇಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್… ಹೀಗೆ ಎಲ್ಲ ರೀತಿಯ ಪರೀಕ್ಷೆಗೆ ಒಳಪಡಿಸಿದರೂ, ಅವರಲ್ಲಿದ್ದ ಕ್ಯಾನ್ಸರ್ ಗೆಡ್ಡೆಗಳು ಕಾಣಿಸುತ್ತಿಲ್ಲ! ಕ್ಯಾನ್ಸರ್‌ಮುಕ್ತರಾದ ಖುಷಿಯಲ್ಲಿ ರೋಗಿಗಳು ಕುಣಿದು ಕುಪ್ಪಳಿಸಿದ್ದಾರೆ.
“ಇಂಥದ್ದೊಂದು ಪವಾಡ ನಡೆದಿರುವುದು ಕ್ಯಾನ್ಸರ್ ಇತಿಹಾಸದಲ್ಲಿ ಇದೇ ಮೊದಲು’ ಎಂದು ನ್ಯೂಯಾರ್ಕ್‌ನ ಮೆಮೋರಿಯಲ್ ಸ್ಲೋವನ್ ಕೆಟರಿಂಗ್ ಕ್ಯಾನ್ಸರ್ ಕೇಂದ್ರದ ಡಾ. ಲೂಯಿಸ್ ಎ ಡಿಯಾಜ್ ಜೆ ಹೇಳಿದ್ದಾರೆ. ಜತೆಗೆ, ಈ ಸಂಶೋಧನೆಯು ವೈದ್ಯಕೀಯ ಜಗತ್ತಿನಲ್ಲೇ ಸಂಚಲನ ಮೂಡಿಸಿದೆ ಎಂದೂ ಅವರು ತಿಳಿಸಿದ್ದಾರೆ. ಈ ಚಿಕಿತ್ಸೆಯು ಹೊಸ ಭರವಸೆಯನ್ನು ಮೂಡಿಸಿದೆ. ಆದರೆ, ಈ ನಿಟ್ಟಿನಲ್ಲಿ ಇನ್ನಷ್ಟು ಅಧ್ಯಯನಗಳು ಹಾಗೂ ದೊಡ್ಡ ಮಟ್ಟದ ಪ್ರಯೋಗಗಳು ನಡೆಯಬೇಕು ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.